ಡಾ. ಬಿ.ಆರ್. ಅಂಬೇಡ್ಕರ್ ಭವನ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ.

ಮೈಸೂರು : ನಗರದಲ್ಲಿ ನಿರ್ಮಾಣವಾಗುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಂದು ಮೈಸೂರು ನಗರದಲ್ಲಿ ಪ್ರಗತಿಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದ ನಿರ್ಮಾಣ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನಿರ್ಮಾಣ ಹಂತದ ವಿವಿಧ ವಿಭಾಗಗಳನ್ನು ವೀಕ್ಷಿಸಿದರು.

ಬಳಿಕ ಮಾತನಾಡಿದ ಸಚಿವರು, “ಅಂಬೇಡ್ಕರ್ ಭವನ ನಿರ್ಮಾಣ ಯೋಜನೆಯು ಅತ್ಯಂತ ಮಹತ್ವಾಕಾಂಕ್ಷೆಯದ್ದಾಗಿದ್ದು, ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬವಾಗಬಾರದು. ಗುಣಮಟ್ಟ ಕಾಯ್ದುಕೊಂಡು ನಿಗದಿತ ಸಮಯದೊಳಗೆ ಬಾಕಿ ಉಳಿದಿರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಕೆ. ರಂಗಸ್ವಾಮಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಎಂಡಿಎ: 2019ಕ್ಕಿಂತ ಮುಂಚೆ ಹಂಚಿಕೆಯಾದ ನಿವೇಶನಗಳ ಬಗ್ಗೆಯೂ ವಿವರ ಸಂಗ್ರಹ
ಮೈಸೂರು ಅಭಿವೃದ್ದಿ ಪ್ರಾಧಿಕಾರ ( ಎಂಡಿಎ) ನಲ್ಲಿ ಶೇ. 50-50 ರ ಅನುಪಾತದಲ್ಲಿ 2019 ರಿಂದ 2023 ರವರೆಗೆ ಹಂಚಿಕೆಯಾದ ನಿವೇಶನಗಳನ್ನು ರದ್ದು ಮಾಡಲಾಗಿದೆ. 2019 ಕ್ಕಿಂತ ಮುಂಚೆಯೂ ಹಂಚಿಕೆಯಾದ ನಿವೇಶನಗಳ ಬಗ್ಗೆ ವಿವರ ಸಂಗ್ರಹಿಸಲು ಸೂಚಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಭೂ ಸ್ವಾಧೀನ ಆಗದೇ ಇದ್ದರೂ ಭೂಮಿ ಕೊಟ್ಟಿದ್ದೇವೆ ಎಂದು ನಿವೇಶನತೆಗೆದುಕೊಂಡಿದ್ದಾರೆ. ರದ್ದಾಗಿರುವ ಸೈಟ್‌ಗಳಲ್ಲಿ ಮನೆ ಕಟ್ಟಿದ್ದಾರೆ ಎನ್ನುವುದರ ಮಾಹಿತಿ ತೆಗೆದುಕೊಂಡು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು..

ನಿವೇಶನಗಳನ್ನು  ಅಕ್ರಮವಾಗಿ ತೆಗೆದುಕೊಂಡಿದ್ದರೆ ಸರ್ಕಾರದಿಂದ ಯಾವುದೇ ಪರಿಹಾರ ಕೊಡುವುದಿಲ್ಲ. ರಸ್ತೆಗೆ ತಮ್ಮ ಜಮೀನು ಕೊಟ್ಟು ಪರಿಹಾರ ಪಡೆದವರೂ ಕೂಡ ನಿವೇಶನ ಪಡೆದಿದ್ದಾರೆ. ಸಾಕಷ್ಟು ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಎಲ್ಲವನ್ನೂ ರದ್ದು ಮಾಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಸಚಿವ ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ತಪ್ಪು ಮಾಡಿದ್ದರೆ ಬಿಜೆಪಿಯವರು ಸದನದಲ್ಲಿ ಚರ್ಚೆಗೆ ಬರಬೇಕಿತ್ತು. ಆದರೆ ಬಿಜೆಪಿಯವರು ಗದ್ದಲ ಮಾಡಿ ಅಧಿವೇಶನವನ್ನೇ ಹಾಳು ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

More articles

Latest article

Most read