ಇರಾನ್ ಮೇಲೆ ಅಮೆರಿಕ ದಾಳಿ; ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ; ಶಾಂತಿ ಸ್ಥಾಪನೆಗೆ ಆಗ್ರಹ

Most read

ವಿಶ್ವಸಂಸ್ಥೆ: ಇರಾನ್‌ ದೇಶನ ಮೂರು ಪರಮಾಣು ಘಟಕಗಳ ಮೇಲೆ ಅಮೆರಿಕ ನಡೆಸಿದ ಬಾಂಬ್ ದಾಳಿಯಿಂದ ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿ ಅಪಾಯಕಾರಿ ತಿರುವು ಪಡೆದುಕೊಂಡಿದೆ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ಆತಂಕ ವ್ಯಕ್ತಪಡಿಸಿದ್ದಾರೆ.

ಇಳಾನ್‌ ಮೇಲೆ ಅಮೆರಿಕ ದಾಳಿ ನಡೆಸಿದ ನಂತರ ನಿನ್ನೆ ವಿಶ್ವಸಂಸ್ಥೆಯ 15 ರಾಷ್ಟ್ರಗಳ ಭದ್ರತಾ ಮಂಡಳಿಯ ತುರ್ತು ಸಭೆ ನಡೆಯಿತು. ಸಭೆಯ ನಂತರ ಮಾತಮಾಡಿದ ಗುಟೆರಸ್, ಮಧ್ಯಪ್ರಾಚ್ಯದ ಜನರು ಮತ್ತೊಂದು ವಿನಾಶಕಾರಿ ಬೆಳವಣಿಗೆಯನ್ನು ಸಹಿಸಲು ಸಾಧ್ಯವಿಲ್ಲ. ಆದರೆ ಈಗ ಪ್ರಚೋದನೆಗೆ ಪ್ರತೀಕಾರದ ಅಪಾಯ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಿಕ್ಕಟ್ಟನ್ನು ಶಮನಗೊಳಿಸಲು ಅಂತರರಾಷ್ಟ್ರೀಯ ಸಮುದಾಯವು ಕೂಡಲೇ ಕಾರ್ಯಪ್ರವೃತ್ತವಾಗಬೇಕು. ಪರಮಾಣು ಕಾರ್ಯಕ್ರಮದ ಕುರಿತು ಗಂಭೀರ ಮಾತುಕತೆಗೆ ಇರಾನ್ ಮರಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಆರಂಭದಿಂದಲೂ ಯಾವುದೇ ಮಿಲಿಟರಿ ಕಾರ್ಯಾಚರಣೆಯನ್ನು ನಾನು ಖಂಡಿಸುತ್ತಲೇ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿರುವ ಅವರು ಭದ್ರತಾ ಮಂಡಳಿಯ ಎಲ್ಲ ಸದಸ್ಯ ರಾಷ್ಟ್ರಗಳು ಸಂಯಮ ಹಾಗೂ ತುರ್ತಾಗಿ ಕಾರ್ಯನಿರ್ವಿಸುವಂತೆ ನಾನು ಆಗ್ರಹಪಡಿಸುಸುತ್ತೇನೆ. ಶಾಂತಿಯ ನಿರೀಕ್ಷೆಯನ್ನು ಕೈಬಿಡಬಾರದು ಎಂದು ಹೇಳಿದ್ದಾರೆ.

ಅಂತರರಾಷ್ಟ್ರೀಯ ಶಾಂತಿ ಹಾಗೂ ಭದ್ರತೆಗೆ ಮೂಲ ಆಧಾರವಾಗಿರುವ ಅಣ್ವಸ್ತ್ರ ಪ್ರಸರಣ ನಿಷೇಧ ಒಪ್ಪಂದವನ್ನು ಇರಾನ್ ಸಂಪೂರ್ಣವಾಗಿ ಗೌರವಿಸಬೇಕು ಎಂದೂ ಸಲಹೆ ನೀಡಿದ್ದಾರೆ.

More articles

Latest article