ಪ್ರಜ್ವಲ್ ಕಾಮಕಾಂಡ ಅಮಿತ್ ಶಾಗೂ ಗೊತ್ತಿತ್ತು: ಲಕ್ಷ್ಮಿ‌ಹೆಬ್ಬಾಳ್ಕರ್

ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಮಾಹಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರುವ ನಾಚಿಕೆಗೇಡಿನ ಕೃತ್ಯ. ಇಡೀ ರಾಜ್ಯ ತಲೆ ತಗ್ಗಿಸುವ ಕೆಲಸ ಪ್ರಜ್ವಲ್ ರೇವಣ್ಣ ಮಾಡಿದ್ದಾರೆ ಎಂದು ಹೇಳಿದರು.

ಈ ಎಲ್ಲ ವಿಚಾರವನ್ನು ಹಾಸನದ ಬಿಜೆಪಿ ನಾಯಕ ದೇವರಾಜೇಗೌಡ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಗಮನಕ್ಕೆ ತಂದಿದ್ದರು‌. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಬೇಡಿ ಎಂದು ಹೇಳಿದ್ದರು. ಮೈತ್ರಿ ಮಾಡಿಕೊಂಡರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಎಂದು ಪತ್ರ ಬರೆದು ವಿನಂತಿಸಿದ್ದರು.

ಕೇಂದ್ರ ಗೃಹಸಚಿವ ಅಮಿತ್ ಶಾ ಮೈಸೂರಿಗೆ ಬಂದಾಗ ಪ್ರೀತಂಗೌಡ ಈ ಎಲ್ಲ ವಿಷಯಗಳನ್ನು ಹೇಳಿದ್ದರು. ಅಮಿತ್ ಶಾ ಅವರಿಗೆ ಎಲ್ಲ ಗೊತ್ತಿದ್ದರೂ ಬಿಜೆಪಿಯವರು ಮೈತ್ರಿ ಮಾಡಿಕೊಂಡರು ಎಂದು ಹೆಬ್ಬಾಳ್ಕರ್ ಹೇಳಿದರು.

More articles

Latest article

Most read