Sunday, September 8, 2024

ಫೆ.10ರಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

Most read

ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಪಕ್ಷದ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕೇಂದ್ರ ಸಚಿವ ಅಮಿತ್ ಶಾ ಲೋಕಸಭೆ ಟಿಕೆಟ್ ಆಕಾಂಕ್ಷಿಗಳು ಮತ್ತು ಅಭ್ಯರ್ಥಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಡುವೆ ಸೀಟು ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲರೊಂದಿಗೆ ಚರ್ಚಿಸಿ ಸೀಟು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

“ಹೈಕಮಾಂಡ್ ಎಲ್ಲಾ ಅಭ್ಯರ್ಥಿಗಳ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ಹೈಕಮಾಂಡ್ ಪರಿಗಣಿಸಲಿದೆ ಎಂದರು.

ರಾಜ್ಯ ಸರಕಾರವೂ ಹಾಲು ಉತ್ಪಾದಕರ ಸಹಾಯಧನದ ಬಾಕಿ ಬಿಡುಗಡೆ ಮಾಡಿಲ್ಲ. ಇದು ರಾಜ್ಯದಲ್ಲಿ ಹಾಲಿನ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಾಲು ಉತ್ಪಾದಕರಿಗೆ ಸಹಾಯಧನ ನೀಡಲಾಗಿತ್ತು. ಆಗ 26ಲಕ್ಷ ರೈತರಿಂದ 85 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಿತ್ತು’ ಎಂದು ಹೇಳಿದರು.

ಈಗ ಕಾಂಗ್ರೆಸ್ ಸರಕಾರ ಇನ್ನೂ 716 ಕೋಟಿ ರೂ. ಬಾಕಿ ಪಾವತಿ ಮಾಡಬೇಕಿದ್ದು, ಇದರಿಂದ 10 ಲಕ್ಷ ಲೀಟರ್ ಹಾಲು ಉತ್ಪಾದನೆ ಕುಸಿದಿದೆ ಎಂದರು.

ಜಾನುವಾರುಗಳು ಕೂಡ ಕಾಂಗ್ರೆಸ್ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿವೆ. ರಾಜ್ಯ ಸರಕಾರ ಕೇಂದ್ರದತ್ತ ಬೊಟ್ಟು ಮಾಡುತ್ತಾ ತನ್ನ ಜವಾಬ್ದಾರಿಯನ್ನೂ ಮರೆಯುತ್ತಿದೆ. ರಾಜ್ಯ ಸರಕಾರ ಬಾಕಿ ಹಣ ಬಿಡುಗಡೆ ಮಾಡಲಿ ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದರು.

More articles

Latest article