ನಟಿ, ಖ್ಯಾತ ನಿರೂಪಕಿ ಅಪರ್ಣಾ ನಿಧನ

ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಅಪರ್ಣಾ(57) ಅವರು ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಇಂದು ಸಂಜೆ ಸಾವನ್ನಪ್ಪಿದ್ದಾರೆ.

ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದರು.

ಅಪರ್ಣಾ ವಸ್ತಾರೆ ಅವರು ಇಂದು ಸಂಜೆ ಬನಶಂಕರಿ 2ನೇ ಸ್ಟೇಜ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳಿದ್ದಾರೆ.

ಹಲವು ಸಿನೆಮಾ, ಧಾರಾವಾಹಿಗಳಲ್ಲಿ ನಟಿಸಿದ್ದ ಅವರು ಮಜಾಟಾಕೀಸ್‌ನಲ್ಲಿ ಕಾಮಿಡಿ ಪಾತ್ರಗಳನ್ನು ಮಾಡುವ ಮೂಲಕ ಮನೆಮಾತಾಗಿದ್ದರು.

More articles

Latest article

Most read