ಬೆಂಗಳೂರಿನ ಪಬ್‌ನಲ್ಲಿ ಆಂಧ್ರದ  ಐಎಎಸ್ ಅಧಿಕಾರಿ ದರ್ಪ, ಎಫ್‌ಐಆರ್ ದಾಖಲು!

ಗುರುತಿನ ಚೀಟಿ ಕೇಳಿದ್ದಕ್ಕೆ ಪೊಲೀಸರ ವಿರುದ್ಧ ಆಕ್ರೋಶ, ಆಂಧ್ರಪ್ರದೇಶದ ಐಎಎಸ್ ಅಧಿಕಾರಿ ವಿಕಾಸ್ ಮರ್ಮತ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ

ಬೆಂಗಳೂರು: ಪಬ್‌ನಲ್ಲಿ ಗುರುತಿನ ಚೀಟಿ ತೋರಿಸುವಂತೆ ಕೇಳಿದ ಪೊಲೀಸರ ಮೇಲೆಯೇ ಆಂಧ್ರದ ಐಎಎಸ್ ಅಧಿಕಾರಿಯೊಬ್ಬರು ದರ್ಪ ಮೆರೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆಂಧ್ರಪ್ರದೇಶದ ಐಎಎಸ್ ಅಧಿಕಾರಿ ವಿಕಾಸ್ ಮರ್ಮತ್ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂಧ್ರಪ್ರದೇಶದ ಕುಪ್ಪಂ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾಗಿರುವ ವಿಕಾಸ್ ಮರ್ಮತ್, ಮದ್ಯದ ಅಮಲಿನಲ್ಲಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಐಡಿ ಕೇಳಿದ ಪೊಲೀಸರಿಗೇ ಅವಾಚ್ಯ ಶಬ್ದಗಳಿಂದ ನಿಂದನೆ?

ಅಕ್ಟೋಬರ್ 9ರಂದು ಬೆಂಗಳೂರು ಪೊಲೀಸ್ ಆಯುಕ್ತರ ಸೂಚನೆಯಂತೆ ನಗರದ ವಿವಿಧ ಪಬ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದರು. ಅದರಂತೆ ರೆಸಿಡೆನ್ಸಿ ರಸ್ತೆಯಲ್ಲಿರುವ ಪಬ್‌ವೊಂದಕ್ಕೆ ತೆರಳಿದ ಪೊಲೀಸ್ ತಂಡ ಪರಿಶೀಲನೆ ಕೈಗೊಂಡಿತ್ತು.

ಈ ವೇಳೆ ಪಬ್‌ನಲ್ಲಿದ್ದ ವಿಕಾಸ್ ಮರ್ಮತ್ ಅವರನ್ನು ಪೊಲೀಸರು ಗುರುತಿನ ಚೀಟಿ ತೋರಿಸುವಂತೆ ಕೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಅಧಿಕಾರಿ, ಪೊಲೀಸರೊಂದಿಗೆ ವಾಗ್ವಾದ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿ ವಿರುದ್ಧ ದರ್ಪದ ಆರೋಪ

ತಪಾಸಣೆ ನಡೆಸುತ್ತಿದ್ದ ಇನ್ಸ್‌ಪೆಕ್ಟರ್ ಅರುಣ್ ಸೋಲಂಕಿ ಹಾಗೂ ಅವರ ಸಿಬ್ಬಂದಿಯೊಂದಿಗೆ ವಿಕಾಸ್ ಮರ್ಮತ್ ಅನುಚಿತವಾಗಿ ವರ್ತಿಸಿ, ಅಧಿಕಾರದ ದರ್ಪ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರ ಕರ್ತವ್ಯ ನಿರ್ವಹಣೆಯ ವೇಳೆ ನಡೆದ ಈ ಘಟನೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲು

ಘಟನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಎಎಸ್ ಅಧಿಕಾರಿ ವಿಕಾಸ್ ಮರ್ಮತ್ ವಿರುದ್ಧ ಅಧಿಕೃತವಾಗಿ ಪ್ರಕರಣ ದಾಖಲಿಸಲಾಗಿದೆ.

More articles

Latest article

Most read