ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ರಾಂಬಿಲ್ಲಿ ಮಂಡಲದ ಅಚ್ಯುತಪುರಂ ನಲ್ಲಿ ಫಾರ್ಮಾ ಕಂಪನಿಯ ರಿಯಾಕ್ಟರ್ ಸ್ಫೋಟಗೊಂಡು 18 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಫಾರ್ಮಾಸ್ಯುಟಿಕಲ್ ಕಂಪನಿ ಕೇಂದ್ರವಾದ ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ (SEZ) ಔಷಧೀಯ ಕಂಪನಿ ಎಸ್ಸೆಂಟಿಯಾದಲ್ಲಿ ಮಧ್ಯಹ್ನದ ವೇಳೆ ಸ್ಫೋಟ ಸಂಭವಿಸಿದೆ. ಅವಘಟದಲ್ಲಿ ಗಾಯಗೊಂಡವರನ್ನು ವಿಶಾಖಪಟ್ಟಣಂನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕೆಲವರನ್ನು ಅನಕಪಲ್ಲಿ ಎನ್‌ಟಿಆರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಯಾಗಿದೆ.
ಅನಕಪಲ್ಲಿ ಹಾಗೂ ಸುತ್ತಮುತ್ತಲ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟ ಹೊಗೆ ಆವರಿಸಿದೆ.