ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಬಾಗೇಪಲ್ಲಿಯ ಮೂವರ ಸಾವು, 6 ಜನರ ಸ್ಥಿತಿ ಗಂಭೀರ

ಅಮರಾವತಿ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಇಂದು ಮುಂಜಾನೆ ಮಾರುತಿ ವ್ಯಾನ್‌ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  9 ಮಂದಿ ಗಾಯಗೊಂಡಿದ್ದು, ಆರು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇವರು ಪ್ರಯಾಣಿಸುತ್ತಿದ್ದ ಟಿಟಿ ವಾಹನಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ತೀವ್ರ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಬಲಕೋಟ ಮಂಡಲದ ಚೆನ್ನಮರಿಮಿಟ್ಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.  ಮೇಘರ್ಷ(17), ಚರಣ್(17) ಮತ್ತು ಶ್ರಾವಣಿ ಮೃತರು. ಇವರೆಲ್ಲರೂ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯಾ ಗ್ರಾಮದವರು ಎಂದು ಗುರುತಿಸಲಾಗಿದೆ. ಇವರು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕೆ ಆಗಮಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮದನಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article

Most read