ಆಂಧ್ರಪ್ರದೇಶ: ಆಶಾ ಕಾರ್ಯಕರ್ತೆಯರ ನಿವೃತ್ತಿ ವಯಸ್ಸು ಹೆಚ್ಚಳ, ವೇತನ ಸಹಿತ ಹೆರಿಗೆ ರಜೆ ಜಾರಿ

Most read

ಅಮರಾವತಿ: ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರಿಗೆ (ಆಶಾ) ಗ್ರಾಚ್ಯುಟಿ ಹಾಗೂ ವೇತನ ಸಹಿತ ಹೆರಿಗೆ ರಜೆ ನೀಡುವ ಮಹತ್ವದ ಪ್ರಸ್ತಾವನೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸಹಿ ಹಾಕಿದ್ದಾರೆ.

ಆಶಾ ಕಾರ್ಯಕರ್ತೆಯರ ನಿವೃತ್ತಿ ವಯಸ್ಸನ್ನು 60ರಿಂದ 62ಕ್ಕೆ ಹೆಚ್ಚಿಸಲಾಗಿದೆ. ಸಮುದಾಯ ಮತ್ತು ಆರೋಗ್ಯ ವ್ಯವಸ್ಥೆ ನಡುವೆ ಅತ್ಯಂತ ಪ್ರಮುಖ ಕೊಂಡಿಯಾಗಿ ಕೆಲಸ ಮಾಡುತ್ತಿರುವವರು ಆಶಾ ಕಾರ್ಯಕರ್ತೆಯರು ಎಂದು ಅವರು ಬಣ್ಣಿಸಿದ್ದಾರೆ.

30 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ ಪ್ರತಿ ಆಶಾ ಕಾರ್ಯಕರ್ತೆಯರು ತಲಾ ರೂ.1.5 ಲಕ್ಷ ನಿವೃತ್ತಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಮುಖ್ಯಮಂತ್ರಿಯವರ ಈ ನಿರ್ಧಾರದಿಂದಾಗಿ 42,752 ಆಶಾ ಕಾರ್ಯಕರ್ತೆಯರಿಗೆ ಪ್ರಯೋಜನವಾಗಲಿದೆ ಎಂದು ಸರ್ಕಾರದ ಪ್ರಕಟಣೆ  ತಿಳಿಸಿದೆ. ಅರ್ಹ ಆರೋಗ್ಯ ಕಾರ್ಯಕರ್ತೆಯರಿಗೆ ಮೊದಲ ಎರಡು ಹೆರಿಗೆಗಳಿಗೆ 180 ದಿನಗಳ ವೇತನ ಸಹಿತ ರಜೆ ನೀಡಲು ಸರ್ಕಾರ ನಿರ್ಧರಿಸಿದೆ. ಇದರೊಂದಿಗೆ ನಿವೃತ್ತಿ ವಯಸ್ಸನ್ನು 60ರಿಂದ 62ಕ್ಕೆ ಮುಖ್ಯಮಂತ್ರಿ ನಾಯ್ಡು ಹೆಚ್ಚಳ ಮಾಡಿದ್ದಾರೆ ಎಂದು ಹೇಳಲಾಗಿದೆ.

More articles

Latest article