ಬೆಂಗಳೂರು : ರಾಜ್ಯ ವಿಧಾನಪರಿಷತ್‌ನ ಖಾಲಿ ಇರುವ 6 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಜೂನ್ 3ರಂದು ಮತದಾನ ನಡೆಯಲಿದೆ.
ರಾಜ್ಯ ಚುನಾವಣಾ ಆಯೋಗ 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳ ಚುನಾವಣೆಗೆ ದಿನಾಂಕ ನಿಗದಿ ಮಾಡಿದದು, ನಾಮಪತ್ರ ಸಲ್ಲಿಕೆಗೆ ಮೇ.16 ಕೊನೆಯ ದಿನಾಂಕವಾಗಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ಮೇ.20 ಕೊನೆಯ ದಿನಾಂಕವಾಗಿದೆ.
ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ , ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ.