ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜ. 17ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025

Most read

ಬೆಂಗಳೂರು: ಕರ್ನಾಟಕ ಕ್ರೀಡಾಕೂಟ-2025  ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಕ್ರೀಡಾಕೂಟ -2025   ವನ್ನು  ಜನವರಿ 17ರಿಂದ  23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ.

ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ  ಜನವರಿ 17ರಂದು   ಮಂಗಳೂರಿನಲ್ಲಿ   ನಡೆಯಲಿದ್ದು ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭ ಉಡುಪಿ ಜಿಲ್ಲೆಯಲ್ಲಿ ನಡೆಯಲಿದ್ದು ಗೃಹ ಸಚಿವರು  ಭಾಗಿಯಾಗಲಿದ್ದಾರೆ. ಸುಮಾರು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು  ಆಯೋಜಿಸುತ್ತಿದ್ದು  ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಕ್ರೀಡಾಕೂಟದಲ್ಲಿ 3750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4500 ಜನರು ಭಾಗವಹಿಸಲಿದ್ದು ಊಟ -ತಿಂಡಿ,ವಸತಿ , ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲಗಳಲ್ಲಿ 11 ಕ್ರೀಡೆಗಳು ಆಯೋಜನೆಗೊಳ್ಳಲ್ಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು.

More articles

Latest article