ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ದೂರು: ಪ್ರಾಸಿಕ್ಯೂಷನ್‌‌ಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಕೋರಿಕೆ

Most read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮತ್ತೊಂದು ಡಿನೋಟಿಫಿಕೇಷನ್ ದೂರು ದಾಖಲಾಗಿದ್ದು, ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವವರು ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಕೋರಿದ್ದಾರೆ.

ಅಬ್ರಹಾಂ ಎಂಬುವವರು ಮುಡಾಗೆ ಸಂಬಂಧಿಸಿದಂತೆ ರಾಜ್ಯಪಾಲ ತಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ದೂರು ನೀಡಿ ಪ್ರಾಸಿಕ್ಯೂಷನ್‌ ಗೆ ಅನುಮತಿ ಕೋರಿದ ಬೆನ್ನಲ್ಲೇ ಈಗ ಹೊಸ ಪ್ರಕರಣ ದಾಖಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮುಡಾದಲ್ಲಿ ತಮ್ಮ ಪ್ರಭಾವ ಬಳಸಿ ಮೈಸೂರು ತಾಲೂಕು ವರುಣ ಹೋಬಳಿಯ ಉತ್ತನಹಳ್ಳಿ ಗ್ರಾಮದಲ್ಲಿನ 1.39 ಎಕರೆ ಜಮೀನ ಡಿನೋಟಿಫೈ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಡವರಿಗೆ, ದೀನ ದಲಿತರಿಗೆ, ಹಿಂದುಳಿದವರಿಗೆ ಅಶ್ರಯ ಮನೆ ನೀಡಲು ಮೈಸೂರು ಜಿಲ್ಲಾಡಳಿತ 1972ರಲ್ಲಿ ಭೂ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು 30 ವರ್ಷಗಳ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿನೋಟಿಫೈ ಮಾಡಲು ಸೂಚಿಸಿದ 14 ತಿಂಗಳಲ್ಲಿಯೇ ಜಿಲ್ಲಾಧಿಕಾರಿಗಳು ಸಿದ್ದರಾಮಯ್ಯ ಅವರು ಸೂಚಿಸಿದ ಹೆಸರಿನವರಿಗೆ ಡಿನೋಟಿಫೈ ಆಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಸಂಬಂಧ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ಅವರಿಗೆ ಕೆಲವು ದಾಖಲೆಗಳನ್ನು ಸಲ್ಲಿಸಿದ್ದು, ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿದ್ದಾರೆ.

ಮುಡಾ ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳು ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದು, ಪಾದಯಾತ್ರ ಮೈಸೂರು ತಲುಪುವುದು ಬಾಕಿ ಇದೆ.

More articles

Latest article