ಧಾರವಾಡ, ಆ.25: ಜಿ.ಪಂ ಸದಸ್ಯ ಯೋಗೇಶ್ಗೌಡ ಕೊಲೆ ಪ್ರಕರಣದಲ್ಲಿ ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಧಾರವಾಡಕ್ಕೆ ತೆರಳಲು ಅನುಮತಿ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಜನಪ್ರತಿನಿಧಿಗಳ ನ್ಯಾಯಾಲಯ ಅಂಗೀಕರಿಸಿದೆ.
ಆದರೆ ಧಾರವಾಡ ಪ್ರವೇಶಕ್ಕೆ ಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿದೆ. ಧಾರವಾಡಕ್ಕೆ ಹೋಗಬಹುದು, ಆದರೆ ಯಾವುದೇ ರೀತಿಯ ಮೆರವಣಿಗೆ ನಡೆಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಅಲ್ಲದೆ, ಕೋರ್ಟ್ ವಿಧಿಸಿರುವ ಯಾವುದೇ ಷರತ್ತನ್ನು ಉಲ್ಲಂಘಿಸಿದರೆ ಜಾಮೀನು ರದ್ದುಪಡಿಸುವುದಾಗಿ ನ್ಯಾಯಾಧೀಶ ಸಂದೀಪ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಹೀಗಾಗಿ ಯೋಗೇಶ್ಗೌಡ ಕೊಲೆ ಪ್ರಕರಣದಲ್ಲಿ ಜಾಮೀನಿನಲ್ಲಿರುವ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಅವಕಾಶ ಸಿಕ್ಕಿರುವುದು ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ

