ಚಿಕ್ಕಮಗಳೂರು: ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣನ ಕಾಮಕಾಂಡ ಪ್ರಕರಣದಲ್ಲಿ ಈಗ ಪ್ರಜ್ವಲ್ ಹೆಸರಿನ ಮತ್ತೊಬ್ಬನ ಬಂಧನವಾಗಿದೆ.
ಸಂಸದ ಮತ್ತು NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ರೆಕಾರ್ಡ್ ಮಾಡಿಕೊಂಡಿದ್ದ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದ ಟ್ರೋಲ್ ಪೇಜ್ ಅಡ್ಮಿನ್ ಪ್ರಜ್ವಲ್ ಎಂಬಾತನನ್ನು ಬಂಧಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ಕುದುರೆಮುಖ ಪೊಲೀಸರು, ಪ್ರಜ್ವಲ್ ನನ್ನು ಬಂಧಿಸಿದ್ದು, ಈತ ಹಲವು ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದ.
ಮೂಡಿಗೆರೆ ತಾಲ್ಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಫೇಸ್ ಬುಕ್, ಯೂಟ್ಯೂಬ್, ಇನ್ಸ್ಟಾ ಗ್ರಾಂಗಳಲ್ಲಿ ಸಂಸದ ಪ್ರಜ್ವಲನ ವಿಡಿಯೋಗಳನ್ನು ಹರಿಬಿಟ್ಟಿದ್ದ ಹಿನ್ನೆಲೆಯಲ್ಲಿ ಕುದುರೆಮುಖ ಠಾಣೆಯಲ್ಲಿ ದೂರು ದಾಖಲಾಗಿತ್ತು.

 
                                    
