ಇನ್ನೂ ಮೂರು ದಿನ ರಾಜ್ಯದಲ್ಲಿ ಭರ್ಜರಿ ಮಳೆ: ಕರಾವಳಿ ಭಾಗಕ್ಕೆ ಅಲರ್ಟ್!

Most read

ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿ ಹೊರಹರಿವು ಹೆಚ್ಚಾಗಿದೆ. ಆದರೂ ಇಂದಿನಿಂದ ಮತ್ತೆ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಆಗಸ್ಟ್‌ 6 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್‌, ಹಾರಂಗಿ, ಹೇಮಾವತಿ, ಕಬಿನಿ, ಆಲಮಟ್ಟಿ, ತುಂಬೆ, ವಾರಾಹಿ ಹೀಗೆ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಇನ್ನು ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಹೆಚ್ಚೇ ಇದೆ, ಇಂದಿನಿಂದ ಮತ್ತೆ 4 ದಿನಗಳ ಕಾಲ ಮುಂದುವರೆಯಲಿದೆ.

ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 4ರ ವರೆಗೆ ಆರೆಂಜ್ ಹಾಗೂ 5 ಮತ್ತು 6 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಅತಿ ಭಾರಿ ಮಳೆ ಹಿನ್ನಲೆ ಇಂದು ಆರೆಂಜ್ ಹಾಗೂ ಆಗಸ್ಟ್ 3 ಮತ್ತು4 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇವತ್ತಿನಿಂದ ಆಗಸ್ಟ್ 6ರ ವರೆಗೆ ಹಲವೆಡೆ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

More articles

Latest article