ಜಾನಪದ ತಜ್ಞ, ಕವಿ, ಕಥೆಗಾರ ಅಮೃತ ಸೋಮೇಶ್ವರ ಅವರು ಶನಿವಾರ ನಿಧನ ಹೊಂದಿದ್ದಾರೆ. ಅಮೃತ ಸೋಮೇಶ್ವರ ಅವರಿಗೆ 89 ವರ್ಷ ವಯಸ್ಸಾಗಿತ್ತು.
ಅಮೃತ ಸೋಮೇಶ್ವರ ಅವರು ಕನ್ನಡ ಪ್ರಾಧ್ಯಾಪಕರಾಗಿ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಓರ್ವ ಹಿರಿಯ ಕನ್ನಡ, ತುಳು ಸಾಹಿತಿ, ಯಕ್ಷಗಾನ ಪ್ರಸಂಗಕರ್ತರು. ಅಲ್ಲದೆ ಸಮಾಜಮುಖಿ ಚಂತನೆಯುಳ್ಳ ಓರ್ವ ಸಹೃದಯಿಯಾಗಿದ್ದರು. ಮಂಗಳೂರು ತಾಲೂಕಿನ ಸೋಮೇಶ್ವರ ಗ್ರಾಮದ ಅಡ್ಕ ನಿವಾಸಿಯಾಗಿರುವ ಅಮೃತ ಸೋಮೇಶ್ವರ ಅವರು 1935 ಸೆಪ್ಟೆಂಬರ್ 27 ರಂದು ಜನಿಸಿದರು.
ತುಳುವಿನಲ್ಲಿ ಕವನ ಸಂಗ್ರಹ, ಪಾಡ್ದನ ಸಂಗ್ರಹ, ನಾಟಕ, ಅನುವಾದಿತ ಕಾವ್ಯ, ನೃತ್ಯ ರೂಪಕ, ರೇಡಿಯೊ ರೂಪಕ, ಅನುವಾದಿತ ನಾಟಕ, ತುಳು ಜಾನಪದ ಕುರಿತಾದ ಸಂಶೋಧನೆ, ಸ್ವತಂತ್ರ ಗಾದೆ, ಭಕ್ತಿಗೀತೆ, ಭಾವಗೀತೆಗಳ ಕೃತಿಗಳನ್ನು ಹೊರತಂದಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ನೇ ಸಾಲಿನ ‘ಗೌರವಶ್ರೀ’ ಪ್ರಶಸ್ತಿ, ಮಣಿಪಾಲ ಅಕಾಡೆಮಿಯ ಮಾಹೆ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿಯಿಂದ, ಸಂಘ ಸಂಸ್ಥೆಗಳ ಸನ್ಮಾನದಿಂದ ಪುರಸ್ಕೃತರಾಗಿದ್ದರು.ಮ