ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ” ಕಾರ್ಯಕ್ರಮದ ಮಹಾತ್ಮಗಾಂಧಿ ಅವರ ಲೋಗೋ ಅನಾವರಣ ಗೊಳಿಸಿದರು.
ಬಳಿಕ ಸುವರ್ಣಸೌಧದ ಮೊದಲ ಮಹಡಿಯಲ್ಲಿ ಅನುಭವ ಮಂಟಪದ ತೈಲ ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿದ, ಸಭಾಧ್ಯಕ್ಷರ ಕೊಠಡಿಯಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಕಲಾವಿದರನ್ನು ಸನ್ಮಾನಿಸಿದರು.