ನಮ್ಮ ಮೆಟ್ರೋ ರೈಲಿನಲ್ಲಿ ಅಪರ್ಣಾ ಅವರ ಧ್ವನಿ ಜೀವಂತ : BMRCL

ಖ್ಯಾತ ನಿರೂಪಕಿ, ನಟಿ ಅಪರ್ಣಾ ವಸ್ತಾರೆ (58) ಗುರುವಾರ ನಿಧನರಾಗಿದ್ದು ಕರ್ನಾಟಕವೇ ಕಂಬನಿ ಮಿಡಿದಿದೆ. ನಮ್ಮ ಮೆಟ್ರೋದಲ್ಲಿ ಅಪರ್ಣಾ ಅವರ ಧ್ವನಿಯನ್ನು ಬಳಸಿದ್ದ ಬಿಎಂಆರ್‌ಸಿಎಲ್‌ ಸಂಸ್ಥೆಯೂ ಭಾವಪೂರ್ಣ ಶ್ರದ್ಧಾಂಜಲಿ ತಿಳಿಸಿ, ನಮ್ಮ ಮೆಟ್ರೋ ರೈಲುಗಳಲ್ಲಿ ಅವರ ಧ್ವನಿ ಜೀವಂತ ಆಗಿರಲಿದೆ ಎಂದು ಅಧಿಕೃತವಾಗಿ ತಿಳಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಮ್ಮ ಮೆಟ್ರೋ, “ಅದೆಷ್ಟೋ ಮೆಟ್ರೋ ಕಾರ್ಯಕ್ರಮಗಳನ್ನು ನಡೆಸಿಕೊಟ್ಟ ಹೆಗ್ಗಳಿಕೆ ಅಪರ್ಣಾ ಅವರದ್ದು. ಇವರಿಗೆ ಭಾಷೆಯ ಮೇಲಿನ ಹಿಡಿತ ಮತ್ತು ಉಚ್ಛಾರಣೆ ಎರಡೂ ಕರಗತವಾಗಿತ್ತು. ಇವರ ಧ್ವನಿ ನಮ್ಮ ಮೆಟ್ರೋವಿನಲ್ಲಿ ಎಂದೆಂದಿಗೂ ಜೀವಂತ. ಮುಂದಿನ ಬಾರಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವಾಗ ಕಣ್ಣು ಮುಚ್ಚಿ ಅವರ ಸ್ಪಷ್ಟ ಕನ್ನಡದ ಸವಿಸವಿಯಿರಿ ಎಂದು ಹೇಳಿದೆ.

ಅಪರ್ಣಾ ಅವರು ಕಳೆದ ಎರಡು ವರ್ಷಗಳಿಂದ ಶ್ವಾಸಕೋಶ ಕ್ಯಾನ್ಸರ್ ನಿಂದಾಗಿ ಬಳಲುತ್ತಿದ್ದರು. ನಿನ್ನೆ ರಾತ್ರೆ ಅವರ ಸಾವಿನ ಸುದ್ದಿಯನ್ನು ಮನೆಯವರೆ ದೃಢಪಡಿಸಿದರು.

More articles

Latest article

Most read