ಕ್ಷಮೆ ಯಾಚಿಸುವಾಗ ಬಿಜೆಪಿ ಶಾಸಕ ರವಿಕುಮಾರ್ ಮೆರವಣಿಗೆ ನಡೆಸಿದ್ದು ಏಕೆ?: ಹೈಕೋರ್ಟ್‌ ಅಸಮಾಧಾನ

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳಿರುವುದಾಗಿ ಆರೋಪಿ, ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಹೈಕೋರ್ಟ್‌ ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ನನ್ನ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಪಡಿಸಬೇಕು ಎಂದು ರವಿಕುಮಾರ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

 ವಿಚಾರಣೆ ವೇಳೆ ಅರ್ಜಿದಾರರ ಪರ ವಾದಿಸಿದ ವಕೀಲ ಎಂ.ವಿನೋದ್ ಕುಮಾರ್  ಈ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಪೀಠ ನೀಡಿದ ಸೂಚನೆಯಂತೆ ಅರ್ಜಿದಾರರು ಜಿಲ್ಲಾಧಿಕಾರಿ ಬಳಿ ತೆರಳಿ ಕ್ಷಮೆ ಕೋರಿದ್ದಾರೆ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಈ ಮಾತಿಗೆ ಪ್ರಾಸಿಕ್ಯೂಷನ್‌ ಪರ ವಕೀಲರು ಅರ್ಜಿದಾರರು ಕ್ಷಮೆ ಕೇಳಲು ತೆರಳುವಾಗ ಬೃಹತ್ ರ‍್ಯಾಲಿ ನಡೆಸಿದ್ದಾರೆ ಎಂದು ಆಕ್ಷೇಪಿಸಿದರು.‌

 ವಿನೋದ್‌ ಕುಮಾರ್ ಇದನ್ನು ಅಲ್ಲಗಳೆದರಾದರೂ ಪ್ರಾಸಿಕ್ಯೂಷನ್‌ ಪರ ವಕೀಲರು ಈ ಕುರಿತ ವಿಡಿಯೊ ಇದೆ ಎಂದರು. ಇದಕ್ಕೆ ನ್ಯಾಯಪೀಠ ರ‍್ಯಾಲಿ ನಡೆಸುವ ಅವಶ್ಯಕತೆ ಏನಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿತು. ವಾದ ಪ್ರತಿವಾದ ಆಲಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿ ಆದೇಶ ಹೊರಡಿಸಿತು. ಅಂತೆಯೇ ದೂರುದಾರರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು. ಈ ಪ್ರಕರಣದಲ್ಲಿ ರವಿಕುಮಾರ್ ಅವರಿಗೆ ವಿಚಾರಣಾ ನ್ಯಾಯಾಲಯ ಈಗಾಗಲೇ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

More articles

Latest article

Most read