ಶ್ರೀನಿವಾಸಪುರ: ಆಟೋಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತೂಪಲ್ಲಿ ಗ್ರಾಮದ ಬಳಿ ಸಂಭವಿಸಿದೆ.
ಲಕ್ಷ್ಮಿಪುರ ಗ್ರಾಮದ ಯಾಸ್ಮೀನ್ (35) ಹರಳಕುಂಟೆ ಗ್ರಾಮದ ಶಬ್ಬೀರ್ ಭಾಷ (40) ಮೃತ ದುರ್ದೈವಿಗಳು. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ

