ಅತ್ಯಾಚಾರ ಆರೋಪ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ FIR 

Most read

ಬೆಂಗಳೂರು: ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ಬಿಜೆಪಿ ಮುಖಂಡನೊಬ್ಬನ ವಿರುದ್ಧ ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ.

ಬಿಜೆಪಿ ಮುಖಂಡ ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮದುವೆಗೆ ಸಾಲ ಕೊಡುವುದಾಗಿ ನಂಬಿಸಿ ಲ್ಯಾಂಗ್ ಫೋರ್ಡ್ ರಸ್ತೆಯ ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 26 ವರ್ಷದ ಯುವತಿ ದೂರು ನೀಡಿದ್ದರು.

ಸಂತ್ರಸ್ತೆ ಯುವತಿಯ ಮತ್ತೊಬ್ಬ ಸ್ನೇಹಿತೆ ಮೂಲಕ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಯುವತಿಗೆ ಮದುವೆ ನಿಶ್ಚಯವಾಗಿತ್ತು. ಈ ಸಮಯದಲ್ಲಿ ಯುವತಿ ಮದುವೆಗಾಗಿ ಸೋಮಶೇಖರ್ ಬಳಿ ಸುಮಾರು ರೂ. 6 ಲಕ್ಷ ಹಣದ ಸಾಲ ಕೇಳಿದ್ದರು. ಆಗ ಜಿಮ್‌ ಸೋಮ ಯುತಿಯನ್ನು ಅಪಾರ್ಟ್‌ ಮೆಂಟ್‌‌ಗೆ ಕರೆಯಿಸಿಕೊಂಡಿದ್ದ.  ಈ ಪ್ರಕರಣ ನಡೆದು ಮೂರು ತಿಂಗಳ ಬಳಿಕ ಸಂತ್ರಸ್ತೆ ಅಶೋಕನಗರ ಠಾಣೆಗೆ ದೂರು ನೀಡಿದ್ದಾರೆ. ಈ ವಿಷಯವನ್ನು ಬಹಿರಂಗಪಡಿಸಿದರೆ  ಕೊಲೆ ಮಾಡುವುದಾಗಿ ಮತ್ತು ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜಿಮ್‌ ಸೋಮ ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ 2018ರ ಚುನಾವಣೆಯಲ್ಲಿ ಸೋಮಶೇಖರ್ ಬಿಜೆಪಿಯಿಂದ ಟಿಕೆಟ್ ಪಡದು ಸ್ಪರ್ಧಿಸಿ ಪರಾಭವಗೊಂಡಿದ್ದ. ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article