31 ಬೈಕ್‌ ಕಳವು ಮಾಡಿದ್ದ ಮೂವರು ಆರೋಪಿಗಳ ಬಂಧನ

ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ 18 ಲಕ್ಷ ರೂ. ಮೌಲ್ಯದ 31 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಅಫ್ಜಲ್‌ ಮತ್ತು ಸಲ್ಮಾನ್‌ ಎಂಬುವರನ್ನು ಕುಮಾರಸ್ವಾಮಿ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ.

ಇವರಿಬ್ಬರ ಬಂಧನದಿಂದ 11 ಕಳವು ಪ್ರಕರಣಗಳು ಪತ್ತೆಯಾಗಿವೆ. ಆರೋಪಿಗಳು ಕದ್ದ ವಾಹನಗಳಲ್ಲಿ ವ್ಹೀಲಿ ಮಾಡುತ್ತಿದ್ದರು.
ಜಾಲಿ ರೈಡ್‌ ಮಾಡುವ ಉದ್ಧೇಶದಿಂದ ಕಳವು ಮಾಡುತ್ತಿದ್ದುದಾಗಿ ಆರೋಪಿಗಳು ಹೇಳಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಮಡಿವಾಳ ಪೊಲೀಸರು ಇನ್ನೊಬ್ಬ ಆರೋಪಿಯನ್ನು ಬಂಧಿಸಿ 10 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈತನ ಬಂಧನದಿಂದ 9
ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article

Most read