ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 47 ವರ್ಷದ ಮಹಿಳೆ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದಾರೆ.
2023 ರ ಜೂನ್ ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಅರುಣ್ ಪುತ್ತಿಲ ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸದ್ದು, ಆತನ ವಿರುದ್ಧ IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಿಜೆಪಿಗೆ ಠಕ್ಕರ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಮಹಿಳೆ ಫಿದಾ ಆಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.