ಸಿಎಂ ಸಿದ್ದರಾಮಯ್ಯಗೆ ಕ್ಷಮೆಯಾಚಿಸಿದ ಬಿಜೆಪಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್

ಜಿಂದಾಲ್‌ಗೆ ಕೊಟ್ಟಿರುವ ಭೂಮಿ ವಿಷಯವಾಗಿ ಸಿಎ‌ಂ ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲಿ ನಾಲಿಗೆ ಹರಿಬಿಟ್ಟಿದ್ದ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್‌ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು‌. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಗೆ ಕ್ಷಮೆಯಾಚಿಸಿ ಪತ್ರ ಬರೆದಿದ್ದಾರೆ.

ಈ ಕುರಿತು ಪತ್ರ ಬರೆದು ಕ್ಷಮೆ ಕೇಳಿರುವ ಅರವಿಂದ್ ಬೆಲ್ಲದ್, ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಜಿಂದಾಲ್ ಕಂಪನಿಯ ಕುರಿತು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ವೇಗವಾಗಿ ಹೇಳಿರುತ್ತೇನೆ. ಆ ಸಂದರ್ಭದಲ್ಲಿ ಮಾತ್ರ ಬಳಸಿದ ಈ ಪದದ ಬಳಕೆಯು ನನಗೆ ಶೋಭೆ ತಂದಿರುವುದಿಲ್ಲ, ತಮಗೆ ನಾನು ಈ ಪತ್ರದ ಮುಖಾಂತರ ಕ್ಷಮೆಯಾಚಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಜಿಂದಾಲ್ ಕಂಪನಿಗೆ ಅತೀ ಕಡಿಮೆ ಬೆಲೆಗೆ ಭೂಮಿ ನೀಡಲು ಹೊರಟಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿರುವ ಅವರು, ಜಿಂದಾಲ್‌ಗೆ ಕೊಟ್ಟಿರುವ ಭೂಮಿ ಸಿದ್ದರಾಮಯ್ಯನ ಅಪ್ಪನ ಮನೆದೋ ಅಥವಾ ಕಾಂಗ್ರೆಸ್ ನವರ ಮನೆಯ ಆಸ್ತಿಯೋ ಅಲ್ಲ ಎಂದು ನಾಲಿಗೆ ಹರಿ ಬಿಟ್ಟಿದ್ದರು.

More articles

Latest article

Most read