ಅರವಿಂದ್ ಕೇಜ್ರಿವಾಲ್‌ಗೆ ತಕ್ಷಣದ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್, ಸಿಬಿಐಗೆ ನೋಟಿಸ್

Most read

ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ತಕ್ಷಣದ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ಎಎಪಿ ಮುಖ್ಯಸ್ಥನ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಕೇಜ್ರಿವಾಲ್ ಅವರಿಗೆ ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಈ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಗಳ ಮೇಲೆ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ, ಆದರೆ ಕೇಜ್ರಿವಾಲ್ಗೆ ‘ಈಗ ಜಾಮೀನು ನೀಡಲಾಗದು’ ಎಂದು ಹೇಳಿದೆ.

ನಾವು ಯಾವುದೇ ಮಧ್ಯಂತರ ಜಾಮೀನು ನೀಡುತ್ತಿಲ್ಲ. ನಾವು ನೋಟಿಸ್ ನೀಡುತ್ತೇವೆ” ಎಂದು ಪೀಠವು ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿಗೆ ತಿಳಿಸಿ, ಪ್ರಕರಣದ ವಿಚಾರಣೆಯನ್ನು ಆಗಸ್ಟ್ 23ಕ್ಕೆ ನಿಗದಿಪಡಿಸಿದೆ.

More articles

Latest article