ಮದರಸಾದಲ್ಲಿ ಬಾಲಕಿಯರ ಮೇಲೆ ಹಲ್ಲೆ: ಆರೋಪಿ ಬಂಧನ

ಬೆಂಗಳೂರು: ಥಣಿಸಂದ್ರದಲ್ಲಿರುವ ಮದರಸಾ ವೊಂದದಲ್ಲಿ ಬಾಲಕಿಯರ ಮೇಲೆ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ಪ್ರಾಂಶುಪಾಲರ ಮಗ ಮೊಹಮ್ಮದ್ ಹಸನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

2021ರಿಂದ ನಡೆಯುತ್ತಿರುವ ಈ ಮದರಸಾದಲ್ಲಿ ಸುಮಾರು 200 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅಕ್ಕಿಯನ್ನು ಚೆಲ್ಲಿದ್ದಾರೆ ಎಂದು ಹಸನ್ ಬಾಲಕಿಯರನ್ನು ತನ್ನ ಕಚೇರಿಗೆ ಕರೆಸಿಕೊಂಡು ಮನಸೋಇಚ್ಛೆ ಹಲ್ಲೆ ನಡೆಸಿದ್ದಾನೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಾಲಕಿಯರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳನ್ನು ಶೌಚಾಲಯ ಮತ್ತು ಅಡುಗೆ ಕೋಣೆಯನ್ನು ಸ್ವಚ್ಛಗೊಳಿಸಲು ಬಳಸಿಕೊಳ್ಳುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದು, ಮದರಸಾ ಎದುರು ಪ್ರತಿಭಟನೆ ನಡೆಸಿದ್ದಾರೆ. ಘಟನೆ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 19 ವರ್ಷದ ಆರೋಪಿ ಮೊಹಮ್ಮದ್ ಹಸನ್ ನನ್ನು ಪೊಲೀಸರು ಬಂಧಿಸಿದ್ದಾರೆ.

More articles

Latest article

Most read