ಬೆಂಗಳೂರು: 2021ರಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ 26 ವಿಷಯಗಳ 1242 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಆಗಿ ಅಂತಿಮ ಆಯ್ಕೆ ಪಟ್ಟಿಯೂ ಪ್ರಕಟವಾಗಿತ್ತು. ಆದರೆ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಗೊಳಿಸುವ ಅಧಿಕೃತ ಜ್ಞಾಪನ ಪತ್ರವನ್ನು ಉನ್ನತ ಶಿಕ್ಷಣ ಇಲಾಖೆ ಒಂದೇ ದಿನದಲ್ಲಿ ಹಿಂಪಡೆದಿತ್ತು.
ಉನ್ನತ ಶಿಕ್ಷಣ ಸಚಿವರು ಆದೇಶ ಕೊಡುವುದನ್ನು ವಿಳಂಬಿಸುತ್ತಿದ್ದಾರೆ. ಇದರಿಂದ ಅಭ್ಯರ್ಥಿಗಳಿಗೆ ತೀವ್ರ ತೊಂದರೆ ತಲೆದೋರಿದೆ ಎಂದು ಅಭ್ಯರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸತ್ಯಾಗ್ರಹ ಆರಂಭಿಸಿದ್ದಾರೆ.
2024ರ ಲೋಕಸಭಾ ಚುನಾವಣೆಯ ಮಾದರಿ ನೀತಿಸಂಹಿತೆ ಜಾರಿಗೆ ಮುನ್ನವೇ ನೇಮಕಾತಿ ಆದೇಶ ಮತ್ತು ಸ್ಥಳ ನಿಯುಕ್ತಿ ಅದೇಶವನ್ನು ಹೊರಡಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅದರ ಮುಂದಾಳುಗಳು ತಿಳಿಸಿದ್ದಾರೆ.