ಮಡಿಕೇರಿ: ಲಾರಿ ಮತ್ತು ಕಾರಿನ ನಡುವೆ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೃತದೇಹಗಳನ್ನು ಕೆವಿಜಿ ಮೆಡಿಕಲ್ ಕಾಲೇಜಿನ ಶವಾಗಾರದಲ್ಲಿ ಇರಿಸಲಾಗಿದೆ.
ಕಾರು ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿತ್ತು. ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಉಳ್ಳಾಲಕ್ಕೆ ಹೋಗಿದ್ದು, ಮಡಿಕೇರಿಗೆ ಹಿಂತಿರುಗುತ್ತಿದ್ದರು ಎಂದು ತಿಳಿದು ಬಂದಿದೆ.