ದೆಹಲಿ ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆ ಮಾಡಲಾಗಿದೆ. ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾನುವಾರ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದರು. ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ಇಂದು ಸಂಜೆ ವೇಳೆಗೆ ರಾಜೀನಾಮೆ ನೀಡಲಿದ್ದು, ಆ ಬಳಿಕ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಸೆ. 17ರಂದು ನಡೆದ ಆಮ್ ಆದ್ಮಿ ಪಾರ್ಟಿಯ ಶಾಸಕಾಂಗ ಸಭೆಯಲ್ಲಿ ಅತಿಶಿ ಅವರನ್ನು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಯಿತು.
ದೆಹಲಿಯ ಅಬಕಾರಿ ನೀತಿಯಡಿ ಬಂಧನಕ್ಕೀಡಾಗಿದ್ದ ಹಾಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಇತ್ತೀಚೆಗಷ್ಟೇ ಜಾಮೀನಿನ ಮೇರೆಗೆ ಬಿಡುಗಡೆಯಾಗಿದ್ದಾರೆ. ಸದ್ಯದಲ್ಲೇ ಸರ್ಕಾರವನ್ನು ವಿಸರ್ಜಿಸಿ ಚುನಾವಣೆಗೆ ಹೋಗುವುದಾಗಿ ಅವರು ಘೋಷಿಸಿದ್ದಾರೆ.