AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8997 POSTS
0 COMMENTS

‘ಗ್ಯಾರಂಟಿ’ ಯೋಜನೆಗಳಿಂದ ಜನರ ಖರೀದಿ ಶಕ್ತಿ ಹೆಚ್ಚಳ; ಬೆಂಗಳೂರು ಅಭಿವೃದ್ಧಿಗೆ ಒತ್ತು: ರಾಜ್ಯಪಾಲರ ಭಾಷಣದ ಮುಖ್ಯಾಂಶಗಳು

ಬೆಂಗಳೂರು: ದೇಶದ ಬಹುತೇಕ ರಾಜ್ಯಗಳ ಜನರ ಖರೀದಿ ಶಕ್ತಿಯು ನಿರೀಕ್ಷಿತ ಮಟ್ಟದಲ್ಲಿ ಇಲ್ಲವಾದರೂ ಕರ್ನಾಟಕದ ಜನರಿಗೆ ಆ ಶಕ್ತಿ ಬಂದಿದೆ. ಇದಕ್ಕೆ ಕಾರಣ ಐದು ಗ್ಯಾರಂಟಿಗಳು ಎಂದು ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಲಾಗಿದೆ. ಗ್ಯಾರಂಟಿಗಳಿಂದ ರಾಜ್ಯದಲ್ಲಿ...

ಸದನದಲ್ಲಿ ಬಟ್ಟೆ ಹರಿದುಕೊಂಡವರಿಂದ ಪಾಠ  ಕಲಿಯಬೇಕಿಲ್ಲ; ಬಿಜೆಪಿಗೆ ಹರಿಪ್ರಸಾದ್‌ ತಿರುಗೇಟು

ಬೆಂಗಳೂರು: ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು BJP Karnataka  ಪಕ್ಷದವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ಕಾಂಗ್ರೆಸ್‌ ಮುಖಂಡ, ಮೇಲ್ಮನೆ ಸದಸ್ಯ ಬಿಕೆ ಹರಿಪ್ರಸಾದ್‌ ಲೇವಡಿ ಮಾಡಿದ್ದಾರೆ. ರಾಜ್ಯಪಾಲರನ್ನು ತಡೆದ ತಮ್ಮನ್ನು...

ಭಾರತೀಯ ಮೂಲ ಗಗನಯಾನಿ ಸುನಿತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿ

ಟೆಕ್ಸಾಸ್‌: ಭಾರತೀಯ ಮೂಲದ, 27 ವರ್ಷಗಳ ಕಾಲ ನಾಸಾದ ಗಗನಯಾನಿಯಾಗಿದ್ದ ಸುನಿತಾ ವಿಲಿಯಮ್ಸ್ ನಿವೃತ್ತಿಯಾಗಿದ್ದಾರೆ. ಸುನಿತಾ ವಿಲಿಯಮ್ಸ್ ಅವರು 2025ರ ಡಿಸೆಂಬರ್‌ 27ರಂದೇ ನಿವೃತ್ತಿಯಾಗಿದ್ದಾರೆ ಎಂದು ನಾಸಾ ಪ್ರಕಟಣೆ ತಿಳಿಸಿದೆ. ನಾಸಾದ ಆಡಳಿತಾಧಿಕಾರಿ ಜಾರೆಡ್ ಐಸಾಕ್‌ಮ್ಯಾನ್ ಅವರು ತಮ್ಮ ಸಂದೇಶದಲ್ಲಿ...

ನೈಸರ್ಗಿಕ ಕೃಷಿ ಪದ್ಧತಿಗೆ ರಾಜ್ಯ ಸರ್ಕಾರ ಒತ್ತು: ಸಚಿವ  ಡಾ. ಶರಣಪ್ರಕಾಶ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ ವಿಶೇಷ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ,...

ನರೇಗಾ ಯೋಜನ ಮರು ಜಾರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌

ಮಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಯನ್ನು ರದ್ದುಗೊಳಿಸಿರುವುದನ್ನು ಪ್ರತಿಭಟಿಸಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದೆ. ಪುರಭವನ ಸಮೀಪದ ರಾಜಾಜಿ ಪಾರ್ಕ್ ನ...

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದೂ ನನ್ನ 1 ವರ್ಷದ ಅವಧಿಯ ಮಹತ್ವದ ಸಾಧನೆ: ಅಮೆರಿಕ ಅಧ್ಯಕ್ಷ ಟ್ರಂಪ್‌

ವಾಷಿಂಗ್ಟನ್: 2025ರಲ್ಲಿ ಭಾರತ- ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ನಿಲ್ಲಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆಯಲಿದ್ದ ಯುದ್ಧವನ್ನು ನಿಲ್ಲಿಸಿದ್ದಾಗಿ ಟ್ರಂಪ್...

ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದನೆ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಕೋಲಾರ ಜಿಲ್ಲೆಯ ಶಿಡ್ಲಘಟ್ಟ ಪೌರಾಯುಕ್ತೆ ಜಿ.ಅಮೃತಾ ಗೌಡ ಅವರನ್ನು ಅಶ್ಲೀಲ, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್‌ ಮುಖಂಡ ಬಿ.ವಿ.ರಾಜೀವ್‌ ಗೌಡ ಅವರನ್ನು ಹೈಕೋರ್ಟ್‌ ಕಟುವಾಗಿ  ತರಾಟೆಗೆ ತೆಗೆದುಕೊಂಡಿದೆ. ಅಮೃತಾ...

ದಾವೋಸ್: ಟಾಟಾ–ಕರ್ನಾಟಕ ಮೈತ್ರಿ; ಹೂಡಿಕೆ, ಉದ್ಯೋಗ ಮತ್ತು ಅಭಿವೃದ್ಧಿಗೆ ಹೊಸ ಅಧ್ಯಾಯ: ಎಂಬಿ ಪಾಟೀಲ್

ಬೆಂಗಳೂರು: ಈ ಬಾರಿಯ ವಿಶ್ವ ಆರ್ಥಿಕ ವೇದಿಕೆಯಲ್ಲಿ  ಟಾಟಾ ಗ್ರೂಪ್ ನೊಂದಿಗೆ ನಮ್ಮ ದೀರ್ಘಕಾಲದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಿದ್ದೇವೆ. ಟಾಟಾ ಗ್ರೂಪ್ ಅಧ್ಯಕ್ಷರಾದ ನಟರಾಜನ್ ಚಂದ್ರಶೇಖರನ್ ಹಾಗೂ ಟಾಟಾ ಎಲೆಕ್ಟ್ರಾನಿಕ್ಸ್ ಸಿಇಒ ಡಾ....

ಸಾಫ್ಟ್‌ವೇರ್ ಬಳಸಿಕೊಂಡು ಎಸ್‌ ಐಆರ್‌ ಹೆಸರಿನಲ್ಲಿ ಅಕ್ರಮ: ಚುನಾವಣಾ ಆಯೋಗದ ವಿರುದ್ಧ ಟಿಎಂಸಿ ವಾಗ್ದಾಳಿ

ನವದೆಹಲಿ: ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ(ಎಸ್‌ ಐ ಆರ್‌) ಹೆಸರಿನಲ್ಲಿ ‌‌ಸಾಫ್ಟ್‌ ವೇರ್ ಮೂಲಕ ಅಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್‌(ಟಿಎಂಸಿ) ವಾಗ್ದಾಳಿ ನಡೆಸಿದೆ. ಸುಪ್ರೀಂ ಕೋರ್ಟ್‌ ಪಾರದರ್ಶಕ ಮತ್ತು ಗೊಂದಲ ರಹಿತವಾಗಿ...

ಐಪಿಎಸ್‌ ಅಧಿಕಾರಿ ರಾಮಚಂದ್ರ ರಾವ್ ವಿರುದ್ಧ ಪಾರದರ್ಶಕ ತನಿಖೆಗೆ ರಾಜ್ಯ ಮಹಿಳಾ ಆಯೋಗ ಪತ್ರ

ಬೆಂಗಳೂರು: ತಮ್ಮ ಅಧಿಕೃತ ಕಚೇರಿಯಲ್ಲಿ ರಾಸಲೀಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ಪಾರದರ್ಶಕ ತನಿಖೆ ನಡೆಸಿ ಏಳು ದಿನಗಳ ಒಳಗಾಗಿ ವರದಿ...

Latest news