ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಜಯಭೇರಿ ಸಾಧಿಸಿದ್ದಾರೆ. 21866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಉಮೇಶ್ ಮೇಟಿ ಸೋಲಿಸಿದ್ದಾರೆ.
ಉಮೇಶ್ ಮೇಟಿ ಪಡೆ ಮತಗಳು: 97941, ವೀರಣ್ಣ ಚರಂತಿಮಠ ಪಡೆದ ಮತಗಳು – 76075
ಹೆಚ್.ವೈ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ ಟಿಕೆಟ್ ನೀಡಲು ನಿರ್ಧರಿಸಿದ್ದ ಕಾಂಗ್ರೆಸ್, ಮೇಟಿ ಪುತ್ರ ಉಮೇಶ್ರನ್ನು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಉಮೇಶ್ ಮೇಟಿ ಅಂತಿಮವಾಗಿ ಗೆಲುವು ಸಿಕ್ಕಿದೆ.

