ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇತರರ ರೆಗ್ಯುಲರ್ ಜಾಮೀನು ಅರ್ಜಿ ವಿಚಾರಣೆ ಡಿಸೆಂಬರ್ 9 ಸೋಮವಾರಕ್ಕೆ ಮುಂದೂಡಲಾಗಿದೆ. ಹೈಕೋರ್ಟ್ ನಲ್ಲಿ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದು ಈಗಾಗಲೇ ದರ್ಶನ್, ಪವಿತ್ರಾ ಗೌಡ ಮತ್ತು ದರ್ಶನ್ ಕಾರು ಚಾಲಕನ ಪರ ವಕೀಲರು ತಮ್ಮ ವಾದವನ್ನು ಪೂರ್ಣಗೊಳಿಸಿದ್ದಾರೆ. ಇಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ತಮ್ಮ ವಾದ ಮಂಡಿಸಿ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ವಾದಿಸಿದರು. ವಾದ ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಡಿಸೆಂಬರ್ 9, ಸೋಮವಾರಕ್ಕೆ ಮುಂದೂಡಿದರು.