ಬಳ್ಳಾರಿ: ಅಪ್ರಾಪ್ತೆ ಮೇಲೆ ಬಿಜೆಪಿ ಯುವ ಮುಖಂಡ ಅತ್ಯಾಚಾರ

Most read

ಬಳ್ಳಾರಿ: ಬಿಜೆಪಿ ಯುವ ಮುಖಂಡನೊಬ್ಬ ಮೇಲೆ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎಂಬಾತ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿದ್ದಾನೆ. ಅತ್ಯಾಚಾರಕ್ಕೆ ಮಹಿಳೆಯೊಬ್ಬರ ಸಹಾಯ ಪಡೆದಿದ್ದಾನೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ದೇವು ನಾಯಕನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ದೇವು ನಾಯಕ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್‌ ಆಕಾಂಕ್ಷಿಯಾಗಿದ್ದ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಆರಂಭಿದ್ದ. ಅಲ್ಲದೇ ರಾಜ್ಯ ಹಾಗೂ ರಾಷ್ಟ್ರ ನಾಯಕರೊಂದಿಗೆ ತೆಗೆಸಿಕೊಂಡಿರುವ ಮತ್ತು ಸೆಲ್ಫಿ ಫೋಟೋಗಳನ್ನು ಸಾಮಾಜಿಕ ಜಾತಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದ.

More articles

Latest article