ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಹಲವು ಕಠಿಣ ನಿಉಮಗಳನ್ನು ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಾರಿಗೊಳಿಸಿದೆ. ಆದರು ಇದನ್ನು ಲೆಕ್ಕಿಸದ ವಾಹನ ಸವಾರರು ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಖಂಡುಬಂದಿದೆ. ಇಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಮನಗರ ಎಸ್‌ಪಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ರಾಮನಗರ ಎಸ್‌ಪಿ ಕಾರ್ತಿಕ್ ರೆಡ್ಡಿ, ಹೆದ್ದಾರಿಯುದ್ದಕ್ಕೂ ಅತ್ಯಾಧುನಿಕ ಕ್ಯಾಮರಾಗಳು, ಸೆನ್ಸರ್ಗಳನ್ನು ಅಳವಡಿಸಲಾಗಿದೆ. ಆದಾಗ್ಯೂ, ಕಳೆದ ಕೆಲವೇ ವಾರಗಳಲ್ಲಿ 2 ಲಕ್ಷಕ್ಕೂ ಹೆಚ್ಚು ವಾಹನ ಸವಾರರು ನಿಯಮ ಉಲ್ಲಂಘಿಸಿದ್ದಾರೆ ಎಂದು ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ಗಂಟೆಗೆ 130 ಕಿಲೋಮೀಟರ್ಗಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಅಂಥವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ವಾಹನ ಸೀಜ್ ಮಾಡಿ, ಲೈಸೆನ್ಸ್ ಕೂಡ ಅಮಾನತಿನಲ್ಲಿಡಲಾಗುತ್ತದೆ. ಈವರೆಗೆ 193 ವಾಹನ ಮಾಲಿಕರ ವಿರುದ್ಧ ಪ್ರಕರಣ ದಾಖಲು ಮಾಡಿದ್ದೇವೆ. ಆರು ಸಾವಿರ ಜನರಿಗೆ ಈಗಾಗಲೇ ದಂಡದ ಸಂದೇಶ ಕಳುಹಿಸಲಾಗಿದೆ. ಉಳಿದ ವಾಹನಸವಾರರಿಗೂ ದಂಡ ಪಾವತಿಸುವಂಯೆ ನೊಟೀಸ್ ನೀಡಲು ಸಿದ್ಧತೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಎರಡು ಲಕ್ಷಕ್ಕೂ ಅಧಿಕ ವಾಹನ ಸವಾರರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಐಟಿಎಮ್ಎಸ್ ಕ್ಯಾಮರಾದಿಂದ ವಾಹನಗಳ ಮೇಲೆ ನಿಗಾ ಇಡಲಾಗುತ್ತಿದೆ. 9 ರೀತಿಯ ನಿಮಯಗಳು ಇದರಲ್ಲಿ ಡಿಟೆಕ್ಟ್ ಆಗುತ್ತವೆ. ನೂರಕ್ಕಿಂತ ಹೆಚ್ಚು ವೇಗದಲ್ಲಿ ಹೋದರೆ ಐಟಿಎಮ್ಎಸ್ ಕ್ಯಾಮರಾ ಪತ್ತೆ ಮಾಡಿ ಮಾಹಿತಿ ಕಳುಹಿಸುತ್ತದೆ. ಅಂಥವರಿಗೆ ಫೈನ್ ಬೀಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಎಐ ಕ್ಯಾಮೆರಾ ಪೋಲ್ ಬಳಿ ಮಾತ್ರವಷ್ಟೇ ಅಲ್ಲ, ಕ್ಯಾಮೆರಾ ಇಲ್ಲದ ಜಾಗದಲ್ಲಿ ವೇಗವಾಗಿ ಹೋದರೂ ಗೊತ್ತಾಗುತ್ತದೆ. ಎರಡು ಕ್ಯಾಮರಾಗಳ ಮಧ್ಯೆ ಇಂತಿಷ್ಟೇ ವೇಗದ ಮಿತಿ ಹಾಗೂ ಸಮಯ ಫಿಕ್ಸ್ ಆಗಿರುತ್ತದೆ. ನೂರಕ್ಕಿಂತ ಹೆಚ್ಚು ವೇಗ ತೆರಳಿದರೆ, ಸಮಯಕ್ಕಿಂತ ಮುಂಚೆ ಕ್ಯಾಮರಾ ಪೋಲ್ ಬಂದ್ರೆ ದಂಡ ವಿಧಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.