ಕನ್ನಡ ಬಲ್ಲ ಅಧಿಕಾರಿಗಳನ್ನು ನೇಮಿಸಲು ಮುಂದಾದ ಬ್ಯಾಂಕ್‌ ಆಫ್‌ ಬರೋಡ, ಸಚಿವ ಶಿವರಾಜ್‌ ತಂಗಡಗಿ ಸ್ವಾಗತ

ಬೆಂಗಳೂರು : ರಾಜ್ಯದ ತನ್ನ ಶಾಖೆಗಳಲ್ಲಿ ಕನ್ನಡ ಮಾತನಾಡಲು ಬಲ್ಲ ಅಧಿಕಾರಿಗಳನ್ನು ನೇಮಿಸಲು ಬ್ಯಾಂಕ್‌ ಆಫ್‌ ಬರೋಡಾ ಮುಂದಾಗಿದೆ.
ಈ ಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸ್ವಾಗತಿಸಿದ್ದು,  ಇದಕ್ಕಾಗಿ ಹೋರಾಟ ನಡೆಸಿದ್ದ ಕನ್ನಡಪರ ಸಂಘಟನೆಗಳಿಗೆ ಹಾಗೂ ಕನ್ನಡಿಗರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.  ಹಾಗೆಯೇ, ರಾಜ್ಯದಲ್ಲಿನ ಎಲ್ಲಾ ಬ್ಯಾಂಕ್​ಗಳೂ ಕನ್ನಡಿಗರೊಂದಿಗೆ ಕನ್ನಡದಲ್ಲೇ ವ್ಯವಹಸುವಂತೆ ಹೇಳಿದ್ದಾರೆ.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ  ಎಲ್ಲಾ ಖಾಸಗಿ ಬ್ಯಾಂಕುಗಳು ಕನ್ನಡ ಬಲ್ಲ ಅಭ್ಯರ್ಥಿಗಳ ನೇಮಕಕ್ಕೆ ಮೊದಲ ಆದ್ಯತೆ ನೀಡಬೇಕು. ಈ ಕುರಿತು ಕೇಂದ್ರ ಹಣಕಾಸು ಇಲಾಖೆ ಸೂಕ್ತ ನಿಯಮ ರೂಪಿಸಬೇಕು ಒತ್ತಾಯಿಸುತ್ತೇನೆ ಎಂದರು. 

ಕನ್ನಡದಲ್ಲಿ ಸೇವೆ ಪಡೆಯುವುದು ಕನ್ನಡಿಗರ ಹಕ್ಕು. ಅದನ್ನು ಖಾತ್ರಿಪಡಿಸುವುದು ಪ್ರತಿಯೊಂದು ಸಂಸ್ಥೆಯ ಕರ್ತವ್ಯ. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಂದು ಬ್ಯಾಂಕಿಗೂ ಕನ್ನಡಿಗರೊಂದಿಗೆ ಕನ್ನಡದಲ್ಲೇ ಸ್ಪಂದಿಸಿ ವ್ಯವಹರಿಸುವ ಜವಾಬ್ದಾರಿ ಇದೆ. ಅದು ಕನ್ನಡಿಗರ ಭಾಷಾ ಹಕ್ಕು. ಇದೇ ಮಾದರಿಯಲ್ಲಿ ಕನ್ನಡಿಗರು ತಮ್ಮದೇ ನೆಲದಲ್ಲಿ ಬ್ಯಾಂಕಿಂಗ್ ಸೇರಿದಂತೆ ಯಾವುದೇ ಸೇವೆ ಪಡೆಯುವಾಗ ಭಾಷೆಯ ಅಡೆತಡೆ ಎದುರಿಸಬಾರದು ಎಂದರು. .

ಕರ್ನಾಟಕದಲ್ಲಿ ಉದ್ಯೋಗ ನೀಡುವಾಗ ಕನ್ನಡಕ್ಕೆ ಆದ್ಯತೆ ಇರಬೇಕು . ಇದು ಕೇವಲ ಉದ್ಯೋಗದ ಪ್ರಶ್ನೆಯಲ್ಲ, ಕನ್ನಡಿಗರ ಭಾಷಾ ಹಕ್ಕು ಮತ್ತು ಆತ್ಮಗೌರವದ ಪ್ರಶ್ನೆ  ಎಂದು   ಹೇಳಿದ್ದಾರೆ.

More articles

Latest article

Most read