ಬಾಗಲಕೋಟೆ: ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಛಾಟಿಸಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ತಿಳಿಸಿದೆ. ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು, ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಲಿಂಗಾಯತ ಧರ್ಮ ವಿರೋಧಿ ಹೇಳಿಕೆ ನೀಡುತ್ತಿದ್ದರು. ಅಕ್ರಮ ಆಸ್ತಿ ಗಳಿಕೆ ಸೇರಿದಂತೆ ಸ್ವಾಮೀಜಿ ಮೇಲೆ ಹಲವು ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎಂದು ಹೇಳಿದರು. ಸ್ವಾಮೀಜಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ. ಈ ಬಗ್ಗೆ 2014ರಲ್ಲೇ ಸ್ವಾಮೀಜಿಗೆ ನೋಟಿಸ್ ನೀಡಲಾಗಿತ್ತು ಎಂದೂ ಅವರು ತಿಳಿಸಿದರು.
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಂಘದ ಅಧ್ಯಕ್ಷ ಶಾಸಕ ವಿಜಯಾನಂದ್ ಕಾಶಪ್ಪನವರ ಅವರು ಪ್ರಕಟಣೆ ನೀಡಿದ್ದು, ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿ ಸನಾತನ ಧರ್ಮ ಪ್ರಚಾರ ಮಾಡಲು ಹೊರಟಿದ್ದಾರೆ. ನಾವು ಬಸವ ತತ್ವ ಆಧಾರ ಜೀವನ ಮಾಡುತ್ತಿದ್ದೇವೆ. ಸ್ವಾಮಿಗಳು ನಮ್ಮ ಸಮಾಜದ ಜನರಿಗೆ ಜಾತಿ ಜನಗಣತಿ ಯಲ್ಲಿ ಹಿಂದೂ ಎಂದು ಬರೆಸುವಂತೆ ಹೇಳುತ್ತಿದ್ದಾರೆ ನಮ್ಮ ಟ್ರಸ್ಟಿನ ಸಭೆಯಲ್ಲಿ ಜಾತಿ ಕಾಲಂ ನಲ್ಲಿ ಲಿಂಗಾಯತ ಪಂಚಮಸಾಲಿ ಎಂದು ಬರೆಸುವಂತೆ ನಿರ್ಣಯ ಕೈಗೊಂಡಿದ್ದಾರೆ ಎಂದು ಆಕ್ಷೇಪಿಸಿದರು.
ಇನ್ನು ಸ್ವಾಮೀಜಿಗಳು ತಮ್ಮ ವಿವೇಚನೆ ಯಂತೆ ಸ್ವಂತ ಆಸ್ತಿ ಮಾಡಿದ್ದಾರೆ. ಇಂತಹ ಹತ್ತು ಹಲವಾರು ಗಂಭೀರ ಆರೋಪಗ ಳು ಸ್ವಾಮೀಜಿ ಮೇಲೆ ಕೇಳಿ ಬಂದಿದ್ದು, ಅವರನ್ನು ಮಠದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಇಂದಿನಿಂದ ಮಠದಲ್ಲಿ ದಾಸೋಹ, ಸಮುದಾಯದ ಕಾರ್ಯಗಳಿಗೆ ಅನುಕೂಲ ಆಗುವಂತೆ ಕಲ್ಯಾಣ ಮಂಟಪ ನಿರ್ಮಿಸಿ ಮುಂಬರುವ ದಿನಗಳಲ್ಲಿ ಪೀಠಕ್ಕೆ ಮತ್ತೊಬ್ಬ ಶ್ರೀ ಗಳನ್ನು ನೇಮಿಸಲಾಗುವುದು ಎಂದೂ ತಿಳಿಸಿದರು.
ಪಂಚಮಸಾಲಿ ಮುಖಂಡರ ಸಭೆಯಲ್ಲಿ ವಿಜಯಾನಂದ್ ಕಾಶಪ್ಪನವರ, ನೀಲಕಂಠ ಅಸೂಟಿ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಪಿ ನಾಡಗೌಡ, ಸೇರಿದಂತೆ ಹಲವು ಟ್ರಸ್ಟಿನ ಮುಖಂಡರು ಭಾಯಾಗಿದ್ದರು.
ಸಮಾಜದಲ್ಲಿ ಇತ್ತೀಚಿಗೆ ನಡೆದ ಬೆಳವಣಿಗೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಸಮಾಜಕ್ಕೆ 2A ಮೀಸಲಾತಿ ಹೋರಾಟ ನಡೆಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಎಂದು ಬರೆಸಿದರೆ ಮೀಸಲಾತಿ ಸಿಗುವುದಿಲ್ಲ. ನಮ್ಮ ಸಮಾಜದ ಬಗ್ಗೆ ಕಾಳಜಿ ವಹಿಸದೇ ಬೇರೆಯವರ ಒತ್ತಡಕ್ಕೆ ಮಣಿದು ಮಾತನಾಡಿರುವ ಸ್ವಾಮಿಗಳು ನಮಗೆ ಬೇಕಿಲ್ಲ ಎಂದು ಟ್ರಸ್ಟಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.