ಬಿಬಿಎಂಪಿ ಬಜೆಟ್‌ ಮಂಡನೆ: ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ಒತ್ತು; ಬೀದಿಬದಿ ವ್ಯಾಪಾರಿಗಳು, ತಾಯಿ ಮಗು ಆರೈಕೆಗೆ ಭರಪೂರ ಹಣ

Most read

ಬೆಂಗಳೂರು: ಬಹುನಿರೀಕ್ಷಿತ 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಿದೆ. ಬಿಬಿಎಂಪಿಯಿಂದ ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಎರಡನೇ ಬಾರಿಗೆ ಬಜೆಟ್ ಮಂಡಿಸಲಾಗಿದೆ. ನಗರದ ಟೌನ್ ಹಾಲ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ಹಣಕಾಸು ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ಅವರು ಬಜೆಟ್ ಮಂಡಿಸಿದರು. ಬಿಬಿಎಂಪಿ ಇತಿಹಾಸದಲ್ಲೇ ಬೃಹತ್ ಗಾತ್ರದ ಬಜೆಟ್ ಇದಾಗಿದೆ. ಈ ಬಾರಿ 19,900 ಕೋಟಿ ಮೊತ್ತದ ಬಜೆಟ್ ಮಂಡಿಸಲಾಗಿದೆ. ಈ ಬಜೆಟ್ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಬ್ರ್ಯಾಂಡ್ ಬೆಂಗಳೂರಿಗೆ ಹೆಚ್ಚಿನ ಅನುದಾನ ಒದಗಿಸಲಾಗಿದೆ.
ಬಜೆಟ್ನ ಶೇಕಡಾ 65% ರಷ್ಟು ಅನುದಾನವನ್ನು ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ಮೀಸಲಿರಿಸಿದ್ದಾರೆ. ಪಾಲಿಕೆ ಬಜೆಟ್ ಅನ್ವಯ ಬರೋಬ್ಬರಿ 12,952 ಕೋಟಿ ಮೊತ್ತ ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ಸೀಮಿತವಾಗಿದೆ. ಈ ಬಾರಿ 4,900 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿದೆ. ಇಡೀ ದೇಶದಲ್ಲೇ ಎರಡನೇ ಅತಿ ಹೆಚ್ಚಿನ ತೆರಿಗೆ ಸಂಗ್ರಹಿಸಿದ ಹೆಗ್ಗಳಿಕೆ ಬಿಬಿಎಂಪಿ ಪಾತ್ರವಾಗಿದೆ. ಎಸ್ ಸಿ/ಎಸ್ ಟಿ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ತೃತೀಯ ಲಿಂಗಿ ಸಮುದಾಯಕ್ಕೆ ಎಲೆಕ್ಟ್ರಾನಿಕ್ ವಾಹನ ಖರೀದಿಗೆ ಪಾಲಿಕೆ ಧನಸಹಾಯ ನೀಡಲಿದ್ದು. ಇದಕ್ಕಾಗಿ ಪಾಲಿಕೆ ಬಜೆಟ್ ನಲ್ಲಿ 10 ಕೋಟಿ ಮೀಸಲಿಸಿದೆ.
ಬೀದಿಬದಿ ವ್ಯಾಪಾರಿಗಳ ಕಲ್ಯಾಣಕ್ಕೆ 10 ಕೋಟಿ, ಸುರಂಗ ಮಾರ್ಗಕ್ಕೆ 42 ಸಾವಿರ ಕೋಟಿ. ಎಲಿವೇಟೆಡ್ ಕಾರಿಡಾರ್ ಹಾಗೂ ಗ್ರೇಡ್ ಸಪರೇಟರ್ ಗಳ ನಿರ್ಮಾಣಕ್ಕೆ 13,200 ಕೋಟಿ ಹಾಗೂ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣಕ್ಕೆ 9 ಸಾವಿರ ಕೋಟಿ, ರಾಜಕಾಲುವೆ ಹಾಗೂ ಸಂಪರ್ಕ ರಸ್ತೆಗೆ 3 ಸಾವಿರ ಕೋಟಿ, ರಸ್ತೆ ವೈಟ್ ಟಾಪಿಂಗ್ ಕಾಮಗಾರಿಗೆ 6 ಸಾವಿರ ಕೋಟಿ, ಸ್ಕೈಡೆಕ್ ನಿರ್ಮಾಣ 400 ಕೋಟಿ ಮೀಸಲಿಡಲಾಗಿದೆ.
ತಾಯಿ, ಮಗು ಆರೈಕೆ ಹಾಗೂ ರಕ್ಷಣೆಗೆ ಬಿಬಿಎಂಪಿಯಿಂದ Save Mom ಯೋಜನೆ ಜಾರಿಗೊಳಿಸಲಾಗಿದೆ. ಪ್ರಾಯೋಗಿಕವಾಗಿ ಎರಡು ಆಸ್ಪತ್ರೆಯಲ್ಲಿ 200 ತಾಯಂದಿರ ಆರೈಕೆ, 24 ಗಂಟೆ ಗರ್ಭಿಣಿ ಆರೈಕೆಗೆ ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ‌ ವ್ಯವಸ್ಥೆ ಬೀದಿ ನಾಯಿಗಳ ಆರೈಕೆ ಹಾಗೂ ಚಿಕಿತ್ಸೆಗೆ ಈ ಸಾಲಿನಲ್ಲಿ 60 ಕೋಟಿ ಮೀಸಲಿಡಲಾಗಿದೆ. ನಗರದ ಆಯ್ದ 16 ಶಾಲೆಗಳ ಕಟ್ಟಡ ಮರು ನಿರ್ಮಾಣ 60 ಶಾಲೆಗಳ ಕೊಠಡಿಗಳನ್ನು ಸ್ಮಾರ್ಟ್ ಕ್ಲಾಸ್ ರೂಂ ಆಗಿ ಪರಿವರ್ತನೆ ಮಾಡಲಾಗುತ್ತದೆ. ಮಳೆ ಅವಾಂತರ ತಡೆಯಲು ರಾಜಕಾಲುವೆ, ಕೆರೆ ಬದಿಯ ಪ್ರದೇಶದಲ್ಲಿ ನೆರೆ ತಡೆಗೆ ಕ್ರಮ. ಈ ಕಾಮಗಾರಿಗೆ 247 ಕೋಟಿ ಮೀಸಲು. ಬೆಂಗಳೂರಿನ ಸೌಂದರ್ಯೀಕರಣಕ್ಕೂ ಅನುದಾನ ಮೀಸಲಿಡಲಾಗಿದೆ. ಆಲಂಕಾರಿಕ ದೀಪಗಳ ಅಳವಡಿಕೆಗೆ 50 ಕೋಟಿ, ಜಂಕ್ಷನ್ ಸುಧಾರಣೆಗೆ 25 ಕೋಟಿ, ಸ್ಕೈಡೆಕ್ ನಿರ್ಮಾಣಕ್ಕೆ ಆರಂಭಿಕವಾಗಿ 50 ಕೋಟಿ. ಸಾರ್ವಜನಿಕ ಸ್ಥಳಗಳ ಸೌಂದರ್ಯೀಕರಣಕ್ಕೆ 25 ಕೋಟಿ ಮೀಸಲಿಡಲಾಗಿದೆ. ಬೆಂಗಳೂರನ್ನು ಅಂದಗಾಣಿಸಲು ಬರೋಬ್ಬರಿ 200 ಕೋಟಿ ನಿಗದಿ ಮಾಡಿದ್ದಾರೆ.
2025-26ನೇ ಸಾಲಿನಲ್ಲಿ ಬೆಂಗಳೂರಿನ ಕಸ ತ್ಯಾಜ್ಯ ನಿರ್ವಹಣೆಗೆ 1,400 ಕೋಟಿ ಮೀಸಲು
ಸಿಬ್ಬಂದಿ ವೆಚ್ಚ – 1,751 ಕೋಟಿ
ಆಡಳಿತ ವೆಚ್ಚ – 393 ಕೋಟಿ
ತ್ಯಾಜ್ಯ ವಿಲೇವಾರಿ – 1,400 ಕೋಟಿ
ನಿರ್ವಹಣಾ ವೆಚ್ಚ – 1,968 ಕೋಟಿ
ಆರೋಗ್ಯ, ಶಿಕ್ಷಣ, ಕಲ್ಯಾಣ – 1 ಸಾವಿರ ಕೋಟಿ
ಅಭಿವೃದ್ಧಿ ಕಾಮಗಾರಿ – 12,952 ಕೋಟಿ
ಸಾಲ ಮರುಪಾವತಿ – 604 ಕೋಟಿ
ಒಟ್ಟು – 19,927 ಕೋಟಿ

More articles

Latest article