Saturday, July 27, 2024

ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಮಾಲೀಕರಿಗೆ ಬಿಬಿಎಂಪಿ’ಯಿಂದ ಮತ್ತೊಂದು ಅವಕಾಶ ; ಆನ್‌ಲೈನ್ ಮೂಲಕ ‘ಒನ್ ಟೈಮ್ ಸೆಟ್ಲ್ ಮೆಂಟ್’ ಪಾವತಿಸಲು ಅನುವು

Most read

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಮಾಲೀಕರಿಗಾಗಿ ‘ಒನ್ ಟೈಮ್ ಸೆಟ್ಲ್ ಮೆಂಟ್’(ಒಟಿಎಸ್) ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಒಟಿಎಸ್ ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರವು ದಿನಾಂಕ: 22-02-2024ರಂದು(ಗುರುವಾರ) ‘ಒನ್ ಟೈಮ್ ಸೆಟ್ಲ್ ಮೆಂಟ್’(ಒಟಿಎಸ್) ಯೋಜನೆಯ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಅದರಂತೆ ಪಾಲಿಕೆಯ ಆಸ್ತಿ ತೆರಿಗೆಯನ್ನು ಆನ್ ಲೈನ್ ಮೂಲಕ ಪಾವತಿಸುವ ಸಾಪ್ಟ್ ವೇರ್ ನಲ್ಲಿ ಒಟಿಎಸ್ ಅನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ನಾಗರಿಕರು ಈಗ ಒಟಿಎಸ್ ನ ಸಂಪೂರ್ಣ ಪ್ರಯೋಜನವನ್ನು ಪಡೆದು ಆನ್‌ಲೈನ್‌ನಲ್ಲಿ ಪಾವತಿಸಬಹುದಾಗಿದೆ.

ಬಿಬಿಎಂಪಿಯ ಆನ್‌ಲೈನ್ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯಲ್ಲಿ OTS ಆದೇಶವನ್ನು ಜಾರಿಗೆ ತಂದಿದ್ದು, ನಾಗರೀಕರು ಸಂಪೂರ್ಣ ಬಡ್ಡಿ ಮನ್ನಾ, ವಂಚನೆ ಪ್ರಕರಣಗಳಲ್ಲಿ ಶೇ 50 ರಷ್ಟು ದಂಡ ಕಡಿತ ಹಾಗೂ ವಸತಿ ಮತ್ತು ಮಿಶ್ರ ಬಳಕೆಗೆ ಪ್ರಕರಣಗಳಲ್ಲಿ ಮಾತ್ರ ಗರಿಷ್ಟ 5-ವರ್ಷಗಳ ಮಿತಿ  ಪ್ರಯೋಜನವನ್ನು ತಕ್ಷಣವೇ ಪಡೆಯಬಹುದಾಗಿದೆ.

ಪಾಲಿಕೆಯ ಅಧಿಕೃತ ವೆಬ್ ಸೈಟ್ https://bbmptax.karnataka.gov.inಗೆ ಭೇಟಿ ನೀಡಿ, ಒಟಿಎಸ್ ನ ಸಂಪೂರ್ಣ ಪ್ರಯೋಜನವನ್ನು ಆನ್‌ಲೈನ್‌ನಲ್ಲಿ ಪಡೆದು ಪಾವತಿಸಬಹುದಾಗಿದೆ.

More articles

Latest article