ಇಡಿ ಇಲಾಖೆ ಹೆಸರಿನಲ್ಲಿ ಬೀಡಿ ಉದ್ಯಮಿ ಮನೆಯಿಂದ ರೂ. 30 ಲಕ್ಷ ದೋಚಿ ಪರಾರಿ

Most read

ಮಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಇಲಾಖೆ ಅಧಿಕಾರಿಗಳು ಎಂದು ನಂಬಿಸಿ ಬೀಡಿ ಉದ್ಯಮಿಯೊಬ್ಬರ ನಿವಾಸದ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ರೂ. 30 ಲಕ್ಷ ಲೂಟಿ ಮಾಡಿರುವ ಪ್ರಕರಣ ಇಲ್ಲಿಗೆ ಸಮೀಪವಿರುವ ಬೋಳಂತೂರು ಹತ್ತಿರದ ನಾರ್ಶ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಉದ್ಯಮವನ್ನು ಹಲವು ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ನೋಂದಣಿ ವಾಹನದಲ್ಲಿ ಆಗಮಿಸಿದ ತಂಡ ದಿಡೀರ್ ದಾಳಿ ನಡೆಸಿದೆ. ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಸುಮಾರು ಎರಡು ಗಂಟೆಗಳ ವರೆಗೆ ಇವರ ನಿವಾಸದಲ್ಲಿ ತನಿಖೆ ನಡೆಸಿದೆ. ಮನೆಯಲ್ಲಿದ್ದ ಸುಮಾರು ರೂ. 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

More articles

Latest article