Thursday, December 12, 2024

ಬೇಲೇಕೇರಿ ಅದಿರು ರಫ್ತು ಕೇಸ್; ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಖಾರದಪುಡಿ ಮಹೇಶ್

Most read

ಬೇಲೇಕೇರಿ ಬಂದರಿನಲ್ಲಿ ಅರಣ್ಯ ಇಲಾಖೆ ಸಂಗ್ರಹಿಸಿಟ್ಟಿದ್ದ ಕಬ್ಬಿಣದ ಅದಿರು ಕಳವು ಮತ್ತು ಅಕ್ರಮವಾಗಿ ವಿದೇಶಗಳಿಗೆ ರಫ್ತು ಮಾಡಿದ ಪ್ರಕರಣದಲ್ಲಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಖಾರದಪುಡಿ ಮಹೇಶ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸುವಂತೆ ಕೋರಿ ಮೆಸರ್ಸ್ ಶ್ರೀ ಲಕ್ಷ್ಮಿ ವೆಂಕಟೇಶ್ವರ ಮಿನರಲ್ಸ್ ಪಾಲುದಾರ ಖಾರದಪುಡಿ ಮಹೇಶ್ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ಅಲ್ಲದೇ, ಅರ್ಜಿಗೆ ಸಂಬಂಧಿಸಿದಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣದಲ್ಲಿ ಮಹೇಶ್ ಜೆ. ಬಿಳಿಯೆ, ಮೆಸರ್ಸ್ ಶ್ರೀ ಲಕ್ಷ್ಮಿ ವೆಂಕಟೇಶ್ವರ ಮಿನರಲ್ಸ್, ಅದರ ಪಾಲುದಾರ ಕೆ ಮಹೇಶ್ ಕುಮಾರ್ ಅಲಿಯಾಸ್ ಖಾರಪುಡಿ ಮಹೇಶ್, ಮೆಸರ್ಸ್ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಸೈಲ್‌ಗೆ ವಿಚಾರಣಾ ನ್ಯಾಯಾಲಯ ಏಳು ವರ್ಷಗಳ ಕಾಲ ಶಿಕ್ಷೆ ಮತ್ತು 9.65 ಕೋಟಿ ರೂ.ಗಳ ದಂಡ ವಿಧಿಸಿ ಆದೇಶಿಸಿತ್ತು. ಈ ಆದೇಶ ರದ್ದುಪಡಿಸಿ ಪ್ರಕರಣದಲ್ಲಿ ಖುಲಾಸೆಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

More articles

Latest article