ಕಾರವಾರ : ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಇಂದು ಆದೇಶ ಹೊರಡಿಸಿದೆ.
ಸೀಝ್ ಆಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಧೀಶರು, ಎಲ್ಲಾ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಸೇರಿದಂತೆ ಮೂವರ ಅಪರಾಧಿಗಳಿಗೆ ನಾಳೆ ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ ಎಂದು ಹೇಳಿದೆ.
ಬೆಲೇಕೆರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳಲ್ಲಿ ಇಂದು ಅಂತಿಮ ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದ ತನಿಖಾ ಸಂಸ್ಥೆ ಸಿಬಿಐನಿಂದ ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು.
ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಳ್ ಬಿಲಿಯಾ ಸೇರಿ ಹಲವರ ವಿರುದ್ಧದ ಕೇಸ್ ಇದೆ. ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್ ಬಿಳೆಯಿ, ಶಾಸಕ ಸತೀಶ್ ಸೇರಿ ಎಲ್ಲಾ ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ.