Sunday, July 14, 2024

ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಗಳ ಸಮಾಗಮ : ಫೋಟೋ ವೈರಲ್

Most read

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಪ್ರಬಲ ಆಕಾಂಕ್ಷಿಗಳ ಪಟ್ಟಿಯಲ್ಲಿರುವ ಡಾ. ಗಿರೀಶ ಸೋನ್ವಾಲ್ಕರ್ ಅವರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಮಾತುಕತೆ ಮಾಡುತ್ತಿರುವ ಫೋಟೋ ಈಗ ಜಿಲ್ಲೆಯಾದ್ಯಂತ ಹೆಚ್ಚು ಸದ್ದು ಮಾಡುತ್ತಿದೆ.

ಸ್ವತಃ ಡಾ. ಗಿರೀಶ ಅವರೇ ಈ ಫೋಟೋವನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸತೀಶ ಜಾರಕಿಹೊಳಿಯವರ ಪುತ್ರಿ ಪ್ರಿಯಂಕಾ ಜಾರಕಿಹೊಳಿ ಅವರ ಹೆಸರು ಕ್ಷೇತ್ರದ ಸ್ಪರ್ಧೆಗೆ ಫೈನಲ್ ಆಗಿದೆ ಎಂದು ಇಲ್ಲಿಯವರೆಗೆ ಹೇಳಲಾಗುತ್ತಿತ್ತು. ಆದರೆ ಕ್ಷೇತ್ರದ ಚುನಾವಣೆಗೆ ಪ್ರಬಲ ಆಕಾಂಕ್ಷಿಗಳಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಪುತ್ರ ಮೃನಾಲ್ ಹೆಬ್ಬಾಳಕರ ಹಾಗೂ ಡಾ. ಗಿರೀಶ ಸೋನ್ವಾಲ್ಕರ್ ಅವರ ಹೆಸರು ಮಾತ್ರ ಬೆಳಗಾವಿ ಕಾಂಗ್ರೆಸ್ ಕಮಿಟಿಯಿಂದ ಕೆಪಿಸಿಸಿಗೆ ಶಿಫಾರಸು ಮಾಡಿರುವುದಾಗಿ ಮಾತುಗಳು ಕೇಳಿ ಬರುತ್ತಿವೆ.

ಈ ಹಿನ್ನೆಲೆಯಲ್ಲಿ ಪ್ರಸ್ತುತ ವೈರಲ್ ಆಗುತ್ತಿರುವ ಫೋಟೋ ಕುರಿತು ಚರ್ಚೆಗಳು ನಡೆಯುತ್ತಿವೆ. ಚತುರ ಆಟಗಾರ, ಜಿಲ್ಲೆಯ ಪ್ರಭಾವಿ ನಾಯಕರಾದ ಸತೀಶ ಜಾರಕಿಹೊಳಿ ಅವರ ಉಪಸ್ಥಿತಿ ಈ ಫೋಟೋದಲ್ಲಿ ಕಾಣಸಿಗುವುದರಿಂದ ಇದು ಹಲವು ಕೋನಗಳಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ. ಕೆಲವರು ಇದನ್ನು ಸಹಜ ಮಾತುಕತೆ ಎನ್ನುತ್ತಿದ್ದರೆ, ಇನ್ನು ಕೆಲವರು ಇಬ್ಬರ ನಡುವಿನ ಸಂಧಾನ ಸಭೆ ಇರಬಹುದು ಎಂದು ವ್ಯಾಖ್ಯಾನಿಸುತ್ತಿದ್ದಾರೆ.

More articles

Latest article