ಕರ್ನಾಟಕ ರಾಜ್ಯೋತ್ಸವ ದಿನ ಕರಾಳ ದಿನ ಆಚರಿಸಲು ಅನುಮತಿ ಕೋರಿ ಮಹರಾಷ್ಟ್ರ ಏಕೀಕರಣ ಸಮಿತಿ (MES) ಮುಖಂಡರಿಗೆ ಅನುಮತಿ ನೀಡುವುದಿಲ್ಲ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯೋತ್ಸವ ಹಿನ್ನೆಲೆ ಕನ್ನಡ ಪರ ಸಂಘಟನೆಗಳ ಜತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಂಗಳವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಬೆಳಗಾವಿಯಲ್ಲಿ ಕರಾಳ ದಿನ ಆಚರಣೆಗೆ ಅವಕಾಶ ಕೊಡುವುದಿಲ್ಲ. ಕರಾಳ ದಿನ ಆಚರಣೆಗೆ ಮುಂದಾದರೆ ಪೊಲೀಸರು ಪ್ರಕರಣ ದಾಖಲಿಸುತ್ತಾರೆ ಎಂದು ಕನ್ನಡ ಪರ ಸಂಘಟನೆಗಳಿಗೆ ಭರವಸೆ ನೀಡಿದ್ದಾರೆ.
1956ರಲ್ಲಿ ರಾಜ್ಯಗಳ ಪುನರ್ ವಿಂಗಡಣೆ ಆದ ಬಳಿಕ ರಾಜ್ಯದ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಬೇಕೆಂದು ಒತ್ತಾಯಿಸಲು ಎಂಇಎಸ್ ಹುಟ್ಟಿಕೊಂಡಿತು. ಕರ್ನಾಟಕ ರಾಜ್ಯ ಉದಯವಾದ ದಿನದಂದೇ ಕರಾಳ ದಿನ ಆಚರಿಸುತ್ತ ಬರಲಾಗಿದೆ.