Wednesday, December 11, 2024

ಬೇನಾಮಿ ಆಸ್ತಿ ಪ್ರಕರಣ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಗೆ ಕ್ಲೀನ್ ಚಿಟ್ ನೀಡಿದ ಐಟಿ

Most read

ಮುಂಬೈ: ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ವಿರುದ್ಧ 2021ರಲ್ಲಿ ದಾಖಲಾಗಿದ್ದ 1 ಸಾವಿರ ಕೋಟಿ ಮೊತ್ತದ ಬೇನಾಮಿ ಆಸ್ತಿ ಖರೀದಿ ಪ್ರಕರಣದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನ್ಯಾಯಮಂಡಳಿ ಕ್ಲೀನ್ ಚಿಟ್ ನೀಡಿದೆ. ಪ್ರಕರಣದಲ್ಲಿ ಆರೋಪ ಸಾಬೀತುಪಡಿಸುವ ಯಾವುದೇ ಸಾಕ್ಷ್ಯಗಳು ದೊರೆತಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಮಂಡಳಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಈ ಮೂಲಕ ಜಪ್ತಿ ಮಾಡಿದ್ದ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆಯು ಅಜಿತ್ ಪವಾರ್ ಕುಟುಂಬಕ್ಕೆ ಹಿಂದಿರುಗಿಸಿದೆ.

ಬೇನಾಮಿ ಆಸ್ತಿಯನ್ನು ಖರೀದಿ ಮಾಡಲು ಅಜಿತ್ ಪವಾರ್ ಹಾಗೂ ಅವರ ಕುಟುಂಬದ ಸದಸ್ಯರಾದ ಸುನೇತ್ರಾ ಪವಾರ್ ಹಾಗೂ ಪಾರ್ಥ ಪವಾರ್ ಅವರು ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಕುರಿತು ಯಾವುದೇ ಸಾಕ್ಷ್ಯಗಳನ್ನು ಹಾಜರುಪಡಿಸಲು ಆದಾಯ ತೆರಿಗೆ ಇಲಾಖೆ ವಿಫಲವಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ಎನ್ಸಿಪಿ ಮುಖಂಡ ಅಜಿತ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ 2021ರ ಅಕ್ಟೋಬರ್ನಲ್ಲಿ ಆದಾಯ ತೆರಿಗೆ ಇಲಾಖೆಯು ದಾಳಿ ನಡೆಸಿತ್ತು. ಅಕ್ರಮವಾಗಿ ಹಣ ವರ್ಗಾವಣೆ ಮಾಡಿ, ಬೇನಾಮಿ ಆಸ್ತಿ ಖರೀದಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಮಹಾರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ಜಮೀನು, ದೆಹಲಿಯಲ್ಲಿನ ಅಪಾರ್ಟ್ಮೆಂಟ್, ಸತಾರಾದಲ್ಲಿರುವ ಜರಂದೇಶ್ವರ ಸಕ್ಕರೆ ಕಾರ್ಖಾನೆ, ಗೋವಾದಲ್ಲಿರುವ ರೆಸಾರ್ಟ್ಗಳನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿತ್ತು.

More articles

Latest article