ಸೆ. 8ರಿಂದ ಬೆಂಗಳೂರಿನಲ್ಲಿ ಅಖಿಲ‌ ಭಾರತ ಮಟ್ಟದ ಸ್ಪೀಕರ್ ಗಳ ಸಮಾವೇಶ: ಯುಟಿ ಖಾದರ್‌

Most read

ಮಂಗಳೂರು: ಕಾಮನ್ ವೆಲ್ತ್ ಸಂಸದೀಯ ಸಂಘದ ಅಖಿಲ‌ ಭಾರತ ಮಟ್ಟದ ಸ್ಪೀಕರ್ ಗಳ ಸಮಾವೇಶವನ್ನು ಸೆಪ್ಟೆಂಬರ್ 8 ರಿಂದ 10ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಇದೇ ಪ್ರಥಮ ಬಾರಿಗೆ ಕರ್ನಾಟಕಕ್ಕೆ ಈ ಸಮ್ಮೇಳನದ ಆತಿಥ್ಯ ವಹಿಸುವ ಅವಕಾಶ ದೊರೆತಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.‌ ಖಾದರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನಕ್ಕೆ ಬೆಂಗಳೂರಿನಲ್ಲಿ ಎರಡು ಸ್ಥಳಗಳನ್ನು ಗುರುತಿಸಲಾಗಿದ್ದು, ಒಂದು ಸ್ಥಳವನ್ನು ಆಯ್ಕೆ ಮಾಡಲಾಗುವುದು. ಸೆಪ್ಟೆಂಬರ್ 11ರಂದು, ಸಮ್ಮೇಳನದಲ್ಲಿ ಭಾಗವಹಿಸುವ ಸ್ಪೀಕರ್ ಗಳಿಗೆ ರಾಜ್ಯ ಪ್ರವಾಸಕ್ಕೆ ಕರೆದೊಯ್ಯಲು ಚಿಂತನೆ ನಡೆಸಲಾಗಿದೆ. ಮೈಸೂರು, ಮಂಗಳೂರು ಹಾಗೂ ಬೇಲೂರು- ಹಳೆಬೀಡು ಈ ಮೂರು ಪ್ರವಾಸಿ ತಾಣಗಳಲ್ಲಿ ಯಾವುದಾದರೂ ಒಂದು ಸ್ಥಳವನ್ನು ಅಂತಿಮಗೊಳಿಸಲಾಗುವುದು ಎಂದರು.

ಸಮ್ಮೇಳನಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಿದೆ. ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಪತಿ‌ ನೇತೃತದಲ್ಲಿ ಸಮ್ಮೇಳನ ನಡೆಯಲಿದೆ. ದೇಶದ ಎಲ್ಲ ರಾಜ್ಯಗಳ ಸ್ಪೀಕರ್ ಹಾಗೂ ಉಪ ಸ್ಪೀಕರ್ ಗಳು, ವಿಧಾನ ಪರಿಷತ್ ನ ಸಭಾಪತಿ, ಉಪ ಸಭಾಪತಿಗಳು, ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಪ್ರಜಾಪ್ರಭುತ್ವ ಬಲಿಷ್ಠ ಗೊಳಿಸುವುದು, ಸ್ಪೀಕರ್ ಗಳ ಪಾತ್ರ ಸೇರಿದಂತೆ ಕೆಲವು ನಿರ್ದಿಷ್ಟ ವಿಷಯಗಳ ಮೇಲೆ ಸಮ್ಮೇಳನದಲ್ಲಿ ಚರ್ಚಿಸಲಾಗುತ್ತದೆ ಎಂದು ತಿಳಿಸಿದರು.

ಸೆಪ್ಟೆಂಬರ್ 8 ರಂದು ಸಂಜೆ 6.30ಕ್ಕೆ ವಿಧಾನ ಸೌಧದಲ್ಲಿ ಲೋಕಸಭೆ ಸ್ಪೀಕರ್ ಉಪಸ್ಥಿತಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನಕ್ಕೆ ಚಾಲನೆ ನೀಡುವರು. ಉದ್ಘಾಟನೆ ಮತ್ತು ಸಮಾರೋಪ ಕಾರ್ಯಕ್ರಮಗಳಿಗೆ ಶಾಸಕರನ್ನು ಆಹ್ವಾನಿಸಲಾಗುವುದು. ನಂತರದ ಕಾರ್ಯಕ್ರಮಗಳಲ್ಲಿ ಆಹ್ವಾನಿತರು ಮಾತ್ರ ಭಾಗವಹಿಸುತ್ತಾರೆ ಎಂದು ಮಾಹಿತಿ ನೀಡಿದರು.

More articles

Latest article