ಅಪಘಾತ; ಇಬ್ಬರು ಬೈಕ್‌ ಸವಾರರ ದುರ್ಮರಣ

ಬೆಂಗಳೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ದುರಂತ ನಗರದ ಬಾಲಗಂಗಾಧರನಾಥ ಮೇಲ್ಸೇತುವೆಯಲ್ಲಿ ನಡೆದಿದೆ. ತಡರಾತ್ರಿ ಸುಮಾರು 1.30ಕ್ಕೆ ಈ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ಮೂಲದ ಅಫ್ಜಲ್ (26) ಹಾಗೂ ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಆಕಾಶ್ (26) ಮೃತ ದುರ್ದೈವಿಗಳು. ಮಣಿ ಮತ್ತು ಕಾಸಿಂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಕೆ.ಪಿ.ಅಗ್ರಹಾರ ನಿವಾಸಿ ಆಕಾಶ್ ಗ್ರೈಂಡರ್ ನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದರೆ ಅಫ್ಜಲ್ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

More articles

Latest article

Most read