ನವದೆಹಲಿ : ಬೆಂಗಳೂರಿನ ಬಾಬು ಸಾ ಪಾಳ್ಯದಲ್ಲಿ ಕಟ್ಟಡ ಕುಸಿತದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬದವರಿಗೆ ನನ್ನ ಸಂತಾಪಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ತಿಳಸಿದ್ದಾರೆ.
ಕಟ್ಟಡ ಕುಸಿತದಲ್ಲಿ ಮೃತಪಟ್ಟ ಕುಟುಂಬದವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ₹2 ಲಕ್ಷರೂಗಳನ್ನು ಮತ್ತು ಗಾಯಳುಗಳಿಗೆ 50 ಸಾವಿರ ರೂಗಳನ್ನು ನೀಡಲು ಪ್ರಧಾನಿ ಮೋದಿ ಘೊಷಿಸಿದ್ದಾರೆ.
ʼಬೆಂಗಳೂರಿನಲ್ಲಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಪ್ರಾಣಹಾನಿಯಾಗಿರುವುದು ಕೇಳಿ ಬೇಸರ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಂತಾಪಗಳು. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ ತಲಾ ₹2 ಲಕ್ಷ ರೂ.ಗಳನ್ನು ಗಾಯಾಳುಗಳಿಗೆ ₹50,000 ರೂಗಳನ್ನು ಪರಿಹಾರ ನೀಡಲಾಗುವುದುʼ ಎಂದು ಪ್ರಧಾನಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

