ಬೆಂಗಳೂರು: ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜುಗೊಂಡಿದ್ದು, ಡಿ. 31 ರಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟಚ್ಚರ ವಹಿಸಿದ್ದಾರೆ. ಹೊಸ ವರ್ಷಾಚರಣೆಗೆ ಹೆಚ್ಚು ಜನಸಂದಣಿ ಸೇರುವ ಇಂದಿರಾನಗರ, ಕೋರಮಂಗಲ, ಎಂ ಜಿ ರಸ್ತೆ, ಬಿಗ್ರೇಡ್ ರಸ್ತೆಯಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಈ ಪ್ರದೇಶಗಳಲ್ಲಿ ಮಹಿಳೆಯರ ಸುರಕ್ಷತೆಗೆ ಹೈಲ್ಯಾಂಡ್ ಮತ್ತು ವಾಚ್ ಟವರ್ ಸ್ಥಾಪಿಸಲಾಗಿದೆ. ಸಾಕಷ್ಟು ಸಂಖ್ಯೆಯಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ.
ಬ್ರಿಗೇಡ್ ರಸ್ತೆಗೆ ಕಾವೇರಿ ಎಂಪೋರಿಯಂ ಕಡೆಯಿಂದ ಮಾತ್ರ ಪ್ರವೇಶ ಕಲ್ಪಿಸಲಾಗಿದ್ದು, ಏಕಮುಖ ಸಂಚಾರ ವ್ಯವಸ್ಥೆ ಇರುತ್ತದೆ. ರಾತ್ರಿ 1 ಗಂಟೆಯವರೆಗೆ ಮಾತ್ರ ಹೊಸ ವರ್ಷ ಆಚರಣೆಗೆ ಸಮಯ ನಿಗದಿ ಮಾಡಲಾಗಿದೆ. ಬೆಂಗಳೂರಿನ ಎಲ್ಲಾ ಮೇಲ್ಸೇತುವೆಗಳನ್ನು ಮುಚ್ಚಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಹಿನ್ನಲೆಯಲ್ಲಿ 11 ಗಂಟೆ ನಂತರ ಎಂ.ಜಿ. ರಸ್ತೆ ಮೆಟ್ರೊ ಸ್ಟೇಷನ್ ಬಂದ್ ಮಾಡಲಾಗುತ್ತದೆ. ಕೇವಲ ಬರುವವರಿಗೆ ಮಾತ್ರ ಅವಕಾಶ ಇರುತ್ತದೆ. ಮರಳಿ ಹೋಗಲು ಹೋಗಲು ಟ್ರಿನಿಟಿ ಸರ್ಕಲ್ ಅಥವಾ ಕಬ್ಬನ್ ಪಾರ್ಕ್ ಸ್ಟೇಷನ್ ಗೆ ಹೋಗಬೇಕಾಗುತ್ತದೆ.
ಎಂಜಿ ರಸ್ತೆ, ಬಿಗ್ರೇಡ್ ರಸ್ತೆ, ಕ್ಲಬ್, ಪಬ್, ರೆಸ್ಟೋರೆಂಟ್ ಗಳಲ್ಲಿ ಫೇಸ್ ಮಾಸ್ಕ್ ನಿಷೇಧಿಸಲಾಗಿದೆ. ಯಾರೊಬ್ಬರೂ ಫೇಸ್ ಮಾಸ್ಕ್ ಧರಿಸುವಂತಿಲ್ಲ. ಡಿಸೆಂಬರ್ 31 ರಾತ್ರಿ 8 ಗಂಟೆಯಿಂದ ಜನವರಿ 1ರ ಬೆಳಗ್ಗೆವರೆಗೆ ಎಂ.ಜಿ. ರಸ್ತೆಯಿಂದ ಅನಿಲ್ ಕುಂಬ್ಳೆ ಸರ್ಕಲ್, ಮೇಯೋ ಹಾಲ್ ಬಳಿಯ ರೆಸಿಡೆನ್ಸಿ ರಸ್ತೆ ಜಂಕ್ಷನ್ ವರೆಗೆ ಸಂಚಾರ ನಿಷೇಧಿಸಲಾಗಿದೆ. ನಗರದ ಹೊರವಲಯಗಳಲ್ಲಿ ನಡೆಯುವ ರೇವ್ ಪಾರ್ಟಿಗಳ ಮೇಲೆ ನಿಗಾ ಇಡಲಾಗುವುದು ಅಲ್ಲದೆ ಅನಧಿಕೃತವಾಗಿ ಆಯೋಜನೆ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ಅನುಚಿತ ವರ್ತನೆ ತೋರುವರಿಗೆ ಕಠಿಣ ಶಿಕ್ಷೆ ಕಾದಿರುತ್ತದೆ. ಬೈಕ್‌ಗಳಲ್ಲಿ ಪದೇ ಪದೇ ಓಡಾಡುವಂತಿಲ್ಲ. ವಿಷ್ ಮಾಡುವ ನೆಪದಲ್ಲಿ ಕೂಗಾಟ, ಪೀಪಿ ಊದುವಂತಿಲ್ಲ. ವಿಚಿತ್ರ ರೀತಿಯ ಮಾಸ್ಕ್ ಧರಿಸುವಂತಿಲ್ಲ. ಮಕ್ಕಳು, ವೃದ್ಧರು ಮತ್ತು ಹೆಣ್ಣುಮಕ್ಕಳಿಗೆ ತೊಂದರೆ ನೀಡುವಂತಿಲ್ಲ ಎಂದು ಅಯುಕ್ತರು ಎಚ್ಚರಿಕೆ ನೀಡಿದ್ದಾರೆ. ಓಲಾ, ಊಬರ್ ಪ್ರತಿನಿಧಿಗಳ ಜತೆಯೂ ಸಭೆ ನಡೆಸಿದ್ದು, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಬಳಿ ಪಿಕಪ್ ಮತ್ತು ಡ್ರಾಪ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಹಣಕ್ಕೆ ಬೇಡಿಕೆ ಇಡದಂತೆ ಸೂಚನೆ ಕೊಡಲಾಗಿದೆ. ಆ್ಯಂಡ್ ಡ್ರೈವ್ ಮತ್ತು ವ್ಹೀಲಿಂಗ್ ಮಾಡುವರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಕುಡಿದು ವಾಹನ ಓಡಿಸುವವರ ಚಾಲನಾ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ. ಹೊಸ ವರ್ಷವನ್ನು ಸಡಗರ ಸಂಭ್ರಮದಿಂದ ಆಚರಿಸಿ, ಆದರೆ ಸುರಕ್ಷತೆ ನಿಮ್ಮ ಮೊದಲ ಆದ್ಯತೆಯಾಗಿರಲಿ.