ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದಾರೆ. ಯಲಹಂಕ, ಮಾನ್ಯತಾ ಟೆಕ್ ಪಾರ್ಜ್, ಎಚ್ ಬಿಆರ್ ಲೇಔಟ್ ಮೊದಲಾದ ಪ್ರದೇಶಗಳಲ್ಲಿ ಮಳೆಯಿಂದಾಗಿರುವ ಆನಾಹುತಗಳನ್ನು ವೀಕ್ಷಿಸಿದರು.
ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು.
ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಆಗ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.
HBR ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಿಸಿ ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಿ ವಿಸ್ತರಿಸಲು ಸೂಚನೆ ನೀಡಿದರು.
ಮಳೆಯಿಂದ ಬಾದಿತವಾಗಿರುವ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.