ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿರುವುದರಿಂದ ಆದಷ್ಟು ಬೇಗ ರಸ್ತೆ ಗುಂಡಿಗಳಿಗೆ ಜಿಬಿಎ ಮುಕ್ತಿ ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಈ ಭರವಸೆ ನೀಡಿದ್ದಾರೆ.
694 ಕೋಟಿ ರೂ ವೆಚ್ಚದಲ್ಲಿ 349 ಕಿಮೀ ಉದ್ದದ 182 ರಸ್ತೆಗಳ ಬ್ಲಾಕ್ ಟಾಪಿಂಗ್ ಕಾಮಗಾರಿ ನಡೆಸಲು ಉದ್ದೇಶಿಸಲಾಗಿದೆ. ಕಾಮಗಾರಿ ಪ್ರಗತಿಯಲ್ಲಿರುವ ರಸ್ತೆಗಳಲ್ಲಿ ನೀರು ನಿಲ್ಲದಂತೆ ಗುಂಡಿಗಳು ಇಲ್ಲದಂತೆ ಡಾಂಬರೀಕರಣ ಮಾಡಲು ಸೂಚನೆ ನೀಡಲಾಗಿದೆ.
401 ಕಿಮೀ ಉದ್ದದ 178 ರಸ್ತೆಗಳು ದೋಷಮುಕ್ತವಾಗಿದ್ದು, ಅಲ್ಲಲ್ಲಿ ಬಿದ್ದಿರುವ ಗುಂಡಿ ಮತ್ತು ಮೇಲ್ಮೈ ಪದರ ಹಾಳಾಗಿದ್ದರೆ ಗುತ್ತಿಗೆದಾರರೇ ದುರಸ್ತಿಪಡಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.